ಗುರುವಾರ , ಅಕ್ಟೋಬರ್ 22, 2020
24 °C
ಕೇಂದ್ರ ಸಚಿವರಿಗೆ ಪತ್ರ ಬರೆದ ಟಿ.ಎಸ್. ನಾಗಾಭರಣ

ಪ್ರಾದೇಶಿಕ ಭಾಷೆಗಳಲ್ಲಿ ಎನ್‌ಇಟಿ ಪರೀಕ್ಷೆಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಎನ್.ಇ.ಟಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಇರುವುದರಿಂದ ದಕ್ಷಿಣ ಭಾರತದ ರಾಜ್ಯಗಳ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವುದು ಸಮಸ್ಯೆಯಾಗುತ್ತಿದೆ. ಹಾಗಾಗಿ ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ನಡೆಸಲು ಕ್ರಮಕೈಗೊಳ್ಳಬೇಕು’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ. 

ಈ ಸಂಬಂಧ ಅವರು ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೊಖ್ರಿಯಾಲ್ ನಿಶಾಂಕ್ ಅವರಿಗೆ ಪತ್ರ ಬರೆದಿದ್ದಾರೆ. ರಾಜ್ಯ ಸರ್ಕಾರಗಳು ಪದವಿ ಕಾಲೇಜುಗಳಿಗೆ ಅಗತ್ಯಕ್ಕೆ ಅನುಗುಣವಾಗಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ನಡೆಸುತ್ತಿದೆ. ಈ ನೇಮಕಾತಿಗೆ ಅರ್ಹತೆ ಪಡೆಯಲು ಯುಜಿಸಿ ಸಂಸ್ಥೆಯು ನಡೆಸುವ ಎನ್.ಇ.ಟಿ ಪರೀಕ್ಷೆಯಲ್ಲಿ ಉತ್ತೀರ್ಣವಾಗುವುದು ಅವಶ್ಯಕ. ಆದರೆ, ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಪ್ರಾದೇಶಿಕ ಭಾಷೆಯಲ್ಲಿ ಇರದ ಕಾರಣ ದಕ್ಷಿಣ ರಾಜ್ಯದ ವಿದ್ಯಾರ್ಥಿಗಳು ಉತ್ತೀರ್ಣರಾಗಲು ಸಾಧ್ಯವಾಗುತ್ತಿಲ್ಲ. ಇದು ಸಂವಿಧಾನದ 14 ಮತ್ತು 15ನೇ ವಿಧಿಯ ಸಂಪೂರ್ಣ ಉಲ್ಲಂಘನೆಯಾಗಿದೆ’ ಎಂದು ತಿಳಿಸಿದ್ದಾರೆ. 

‘ಒಕ್ಕೂಟ ವ್ಯವಸ್ಥೆಯಲ್ಲಿ ಭಾರತ ಸರ್ಕಾರದ ಸಂವಿಧಾನದ 8ನೇ ಪರಿಚ್ಚೇದದ ಅನುಸಾರ ಕನ್ನಡ ಸೇರಿದಂತೆ 22 ಭಾಷೆಗಳಿಗೂ ಮಾನ್ಯತೆ ನೀಡಬೇಕು. ಆಯಾ ಪ್ರಾದೇಶಿಕ ಭಾಷೆಗಳಲ್ಲಿ ಕೇಂದ್ರ ಸರ್ಕಾರ ಪರೀಕ್ಷೆಗಳನ್ನು ನಡೆಸಲು ಮುಂದಾಗಬೇಕು’ ಎಂದು ಪ್ರತಿಪಾದಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು