ಭಾನುವಾರ, ಏಪ್ರಿಲ್ 11, 2021
32 °C

ಪ್ರತ್ಯೇಕ ಜಿಲ್ಲೆಗೆ ಆಗ್ರಹಿಸಿ ‘ಶಿರಸಿ ಬಂದ್’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಸಿ: ಉತ್ತರ ಕನ್ನಡದ ಘಟ್ಟದ ಮೇಲಿನ ಏಳು ತಾಲ್ಲೂಕುಗಳನ್ನು ಒಳಗೊಂಡು ಪ್ರತ್ಯೇಕ ಶಿರಸಿ ಜಿಲ್ಲೆ ರಚನೆಗೆ ಒತ್ತಾಯಿಸಿ ಮೊದಲ ಬಾರಿಗೆ ಬುಧವಾರ ‘ಶಿರಸಿ ಬಂದ್’ ನಡೆಯಿತು.

ಶಿರಸಿ ಜಿಲ್ಲಾ ಹೋರಾಟ ಸಮಿತಿ ನೇತೃತ್ವದಲ್ಲಿ ಬೃಹತ್‌ ಸಂಖ್ಯೆಯ ಜನರು ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡರು. ನಗರದ ಅಂಗಡಿ–ಮುಂಗಟ್ಟುಗಳನ್ನು ಮಧ್ಯಾಹ್ನದವರೆಗೂ ಮುಚ್ಚಲಾಗಿತ್ತು. ತುರ್ತುಸೇವೆಗಳನ್ನು ಹೊರತುಪಡಿಸಿ ಉಳಿದ ವಹಿವಾಟು ಸ್ತಬ್ಧಗೊಂಡಿತ್ತು. ನಗರ ವ್ಯಾಪ್ತಿಯ ಕೆಲ ಶಾಲಾ–ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.

ಮುಖ್ಯ ರಸ್ತೆಗಳಲ್ಲಿ ಪ್ರತಿಭಟನೆ ಜಾಥಾ ನಡೆಸಿ ಬಳಿಕ ಉಪವಿಭಾಗಾಧಿಕಾರಿ ಆಕೃತಿ ಬನ್ಸಾಲ್ ಅವರಿಗೆ ಮನವಿ ಸಲ್ಲಿಸಲಾಯಿತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು