ಬೆಂಗಳೂರು: ವರ್ಷಾರಂಭದಲ್ಲಿಯೇ ಹಲವರಲ್ಲಿ ಡೆಂಗಿ ಜ್ವರ ಕಾಣಿಸಿಕೊಂಡಿದ್ದು, ಒಂದು ತಿಂಗಳ ಅವಧಿಯಲ್ಲಿ 427 ಡೆಂಗಿ ಪ್ರಕರಣಗಳು ದೃಢಪಟ್ಟಿವೆ.

ಕಳೆದ ವರ್ಷ ಈ ವೇಳೆ 275 ಪ್ರಕರಣಗಳು ವರದಿಯಾಗಿದ್ದವು. ಈ ವರ್ಷ ಈಗಾಗಲೇ 7 ಸಾವಿರಕ್ಕೂ ಅಧಿಕ ಡೆಂಗಿ ಶಂಕಿತರನ್ನು ತಪಾಸಣೆಗೆ ಒಳಪಡಿಸಲಾಗಿದೆ. ಅವರಲ್ಲಿ 4,738 ಮಂದಿಯ ರಕ್ತದ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ರಾಜ್ಯದ 26 ಜಿಲ್ಲೆಗಳಲ್ಲಿ ಡೆಂಗಿ ಪ್ರಕರಣಗಳು ಪತ್ತೆಯಾಗಿವೆ.

ಬಿಬಿಎಂಪಿ ವ್ಯಾಪ್ತಿಯಲ್ಲಿಯೇ 1,140 ಮಂದಿಯಲ್ಲಿ ಡೆಂಗಿ ಶಂಕೆ ವ್ಯಕ್ತವಾಗಿದ್ದು, 181 ಮಂದಿಯಲ್ಲಿ ಈ ಜ್ವರ ದೃಢಪಟ್ಟಿದೆ. ಶಿವಮೊಗ್ಗ, ತುಮಕೂರಿನಲ್ಲಿ ತಲಾ 20, ಚಿತ್ರದುರ್ಗ, ವಿಜಯಪುರದಲ್ಲಿ ತಲಾ 17, ಬಾಗಲಕೋಟೆ ಹಾಗೂ ಕೋಲಾರದಲ್ಲಿ ತಲಾ 13, ಮಂಡ್ಯದಲ್ಲಿ 12, ಕೊಪ್ಪಳ, ವಿಜಯನಗರ, ಯಾದಗಿರಿ, ಧಾರವಾಡದಲ್ಲಿ ತಲಾ 11 ಹಾಗೂ ಹಾಸನದಲ್ಲಿ 10 ಪ್ರಕರಣ ದೃಢಪಟ್ಟಿದೆ. ಉಳಿದ ಜಿಲ್ಲೆಗಳಲ್ಲಿ ಈ ಸಂಖ್ಯೆ 10ಕ್ಕಿಂತ ಕಡಿಮೆಯಿದೆ.

21 ಜಿಲ್ಲೆಗಳಲ್ಲಿ ಚಿಕೂನ್‌ಗುನ್ಯಾ ಪ್ರಕರಣಗಳು ಪತ್ತೆಯಾಗಿವೆ. 3 ಸಾವಿರಕ್ಕೂ ಅಧಿಕ ಮಂದಿ ಚಿಕೂನ್‌ಗುನ್ಯಾ ಶಂಕಿತರನ್ನು ಗುರುತಿಸಿ, ತಪಾಸಣೆಗೆ ಒಳಪಡಿಸಲಾಗಿದೆ. 1964 ಅಧಿಕ ಮಂದಿಯ ರಕ್ತ ಪರೀಕ್ಷೆ ನಡೆಸಲಾಗಿದೆ. ಅವರಲ್ಲಿ 135 ಮಂದಿ ಈ ಜ್ವರಕ್ಕೆ ಒಳಗಾಗಿರುವುದು ದೃಢಪಟ್ಟಿದೆ. ಕಳೆದ ವರ್ಷ ಈ ವೇಳೆ 84 ಪ್ರಕರಣಗಳು ಖಚಿತಪಟ್ಟಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.