ಬೆಂಗಳೂರು: ಐಎಎಸ್ ಅಧಿಕಾರಿ ಗಳಾದ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಮತ್ತು ಬಿಬಿಎಂಪಿ ವಿಶೇಷ ಆಯುಕ್ತ ಎಸ್. ರಂಗಪ್ಪ ಅವರನ್ನು ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಅಮಾನತುಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಶನಿವಾರ ಆದೇಶ ಹೊರಡಿಸಿದೆ.

ಚಿಲುಮೆ ಸಂಸ್ಥೆಯು ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಮತದಾರರ ಮಾಹಿತಿ ಕಳವು ಮಾಡಿರುವ ಆರೋಪಕ್ಕೆ ಸಂಬಂಧಿಸಿ ಕೇಂದ್ರ ಚುನಾವಣಾ ಆಯೋಗ ಶುಕ್ರವಾರ ಹಲವು ಕ್ರಮಗಳನ್ನು ಕೈಗೊಂಡಿತ್ತು.

ಮಹದೇವಪುರ ವಿಧಾನಸಭಾ ಕ್ಷೇತ್ರದ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಯಾಗಿದ್ದ ಕೆ.ಶ್ರೀನಿವಾಸ್ ಹಾಗೂ ಶಿವಾಜಿನಗರ ಮತ್ತು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರಗಳ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಯಾಗಿದ್ದ ಎಸ್. ರಂಗಪ್ಪ ಅವರನ್ನು ಸೇವೆಯಿಂದ ಅಮಾನತು ಮಾಡಿ, ಇಲಾಖಾ ವಿಚಾರಣೆ ನಡೆಸುವಂತೆ ಆಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿತ್ತು.

ಇಬ್ಬರೂ ಅಧಿಕಾರಿಗಳನ್ನು ಇಲಾಖಾ ವಿಚಾರಣೆ ಕಾಯ್ದಿರಿಸಿ ಅಮಾನತುಗೊಳಿಸಿದೆ. ಅಮಾನತಿನ ಅವಧಿಯಲ್ಲಿ ಲಿಖಿತ ಅನುಮತಿ ಇಲ್ಲದೆ ಕೇಂದ್ರಸ್ಥಾನ ತೊರೆಯದಂತೆ ಇಬ್ಬರಿಗೂ ನಿರ್ಬಂಧ ವಿಧಿಸಲಾಗಿದೆ.

ಶಿವಾಜಿನಗರ, ಚಿಕ್ಕಪೇಟೆ ಮತ್ತು ಮಹದೇವಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಖಾಸಗಿ ವ್ಯಕ್ತಿಗಳಿಗೆ ಮತಗಟ್ಟೆ ಹಂತದ ಅಧಿಕಾರಿಗಳು (ಬಿಎಲ್ಒ/ಬಿಎಲ್ಸಿ) ಎಂದು ಗುರುತಿನ ಚೀಟಿ ವಿತರಿಸಿರುವುದು ಪೊಲೀಸ್ ತನಿಖೆಯಲ್ಲಿ ಪತ್ತೆಯಾಗಿದೆ.

ಈ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಡೆದಿರುವ ಎಲ್ಲ ಪ್ರಕ್ರಿಯೆ ಗಳನ್ನು ಸಮಗ್ರವಾಗಿ ಪರಿಶೀಲನೆ ನಡೆಸುವಂತೆ ಆಯೋಗ ಶುಕ್ರವಾರ ಆದೇಶ ಹೊರಡಿಸಿತ್ತು. ಲೋಪ ತಡೆಯುವಲ್ಲಿ ವಿಫಲರಾದ ಆರೋಪದ ಮೇಲೆ ಇಬ್ಬರೂ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಗಳನ್ನು ಅಮಾನತು ಮಾಡುವಂತೆ ಸೂಚಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.