ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೈಜೀರಿಯಾದ ಡ್ರಗ್ಸ್ ಪೆಡ್ಲರ್‌ಗಳ ಬಂಧನ

Last Updated 19 ಸೆಪ್ಟೆಂಬರ್ 2020, 11:53 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಹಲವರಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಆರೋಪದಡಿ ನೈಜೀರಿಯಾದ ಇಬ್ಬರು ಪೆಡ್ಲರ್‌ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ನಾನಸೊ ಜೋಚಿನ್ (36) ಹಾಗೂ ತ್ರವೋರಿ ಬೆನ್ (25) ಬಂಧಿತರು. ಅವರಿಂದ ₹ 10 ಲಕ್ಷ ಮೌಲ್ಯದ 25 ಎಲ್‌ಎಸ್‌ಡಿ ಸ್ಟ್ರಿಪ್ಸ್ ಹಾಗೂ 134 ಎಂಡಿಎಂಎ ಮಾತ್ರೆಗಳನ್ನು ಜಪ್ತಿ ಮಾಡಲಾಗಿದೆ.

‘ರಾಮಮೂರ್ತಿನಗರದ ಒಎಂಬಿಆರ್ ಲೇಔಟ್‌ನಲ್ಲಿ ಆರೋಪಿಗಳು ಡ್ರಗ್ಸ್ ಮಾರಾಟ ಮಾಡಲು ಬಂದಿದ್ದರು. ಅದೇ ವೇಳೆಯೇ ದಾಳಿ ಮಾಡಿ ಬಂಧಿಸಲಾಗಿದೆ. ವೈದ್ಯಕೀಯ ಚಿಕಿತ್ಸೆ ಕಾರಣಕ್ಕೆ ವೀಸಾ ಪಡೆದು 2017ರಲ್ಲಿ ನಗರಕ್ಕೆ ಬಂದಿದ್ದ ಆರೋಪಿಗಳು, ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದರು’ ಎಂದು ಸಿಸಿಬಿ ಅಧಿಕಾರಿಯೊಬ್ಬರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT