ಶುಕ್ರವಾರ, ಏಪ್ರಿಲ್ 23, 2021
32 °C

ಧರ್ಮೇಗೌಡ ಸಾವಿಗೆ ಆಘಾತ ವ್ಯಕ್ತಪಡಿಸಿದ ದೇವೇಗೌಡ, ಕುಮಾರಸ್ವಾಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿಧಾನ ಪರಿಷತ್ ಉಪ ಸಭಾಪತಿ ಎಸ್.ಎಲ್. ಧರ್ಮೇಗೌಡ ಸಾವಿನ ಕುರಿತಂತೆ ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಆಘಾತ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ.. ರೈಲ್ವೆ ಹಳಿಯಲ್ಲಿ ಎಸ್.ಎಲ್. ಧರ್ಮೇಗೌಡ ಮೃತದೇಹ ಪತ್ತೆ: ಆತ್ಮಹತ್ಯೆ ಶಂಕೆ

ವಿಧಾನಪರಿಷತ್ ಉಪಸಭಾಪತಿ ಹಾಗೂ  ಮುಖಂಡರಾದ ಎಸ್.ಎಲ್. ಧರ್ಮೇಗೌಡರು ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ಕೇಳಿ ಆಘಾತವಾಗಿದೆ. ಸಜ್ಜನ, ಸನ್ನಡತೆಯ ಉಪಸಭಾಪತಿಗಳನ್ನು ಕಳೆದುಕೊಂಡದ್ದು ನಮ್ಮ ರಾಜ್ಯದ ನಷ್ಟ. ಅವರ ಕುಟುಂಬ ಹಾಗೂ ಬಂಧುಮಿತ್ರರಿಗೆ ಈ ನೋವು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಟ್ವೀಟ್ ಮಾಡಿದ್ದಾರೆ.

 

ವಿಧಾನಪರಿಷತ್ ಉಪಸಭಾಪತಿ,  ಪಕ್ಷದ ಹಿರಿಯ ಮುಖಂಡರು ಹಾಗೂ ನನ್ನ ಸಹೋದರರಂತಿದ್ದ ಎಸ್.ಎಲ್.ಧರ್ಮೇಗೌಡರ ಆತ್ಮಹತ್ಯೆ ಸುದ್ದಿ ತೀವ್ರ ಆಘಾತವನ್ನುಂಟುಮಾಡಿದೆ. ನಿಷ್ಕಲ್ಮಶ ವ್ಯಕ್ತಿತ್ವದ ಸಜ್ಜನ ರಾಜಕಾರಣಿಯೊಬ್ಬರನ್ನು ನಾವು ಕಳೆದುಕೊಂಡಿದ್ದೇವೆ. ಧರ್ಮೇಗೌಡರ ಕುಟುಂಬ ಮತ್ತು ಅಭಿಮಾನಿಗಳಿಗೆ ಈ ನೋವು ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
 

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು