ಶುಕ್ರವಾರ, ಡಿಸೆಂಬರ್ 3, 2021
26 °C

ಯುಪಿಎಸ್‌ಸಿ: ಹೆಡ್ ಕಾನ್‌ಸ್ಟೇಬಲ್ ಪುತ್ರಿಯ ರ‍್ಯಾಂಕ್ ಸಾಧನೆಗೆ ಡಿಜಿಪಿ ಮೆಚ್ಚುಗೆ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಡೆಸುವ ಕೇಂದ್ರ ನಾಗರಿಕ ಸೇವಾ ಪರೀಕ್ಷೆಯ 2020ನೇ ಸಾಲಿನ ಫಲಿತಾಂಶ ಇತ್ತೀಚೆಗೆ ಪ್ರಕಟಗೊಂಡಿದ್ದು, ಆರ್‌.ಎನ್‌. ಬಿಂದು ಮಣಿ ಅವರು 468 ನೇ ರ‍್ಯಾಂಕ್‌ ಪಡೆದಿದ್ದಾರೆ.

ಕೆಎಸ್‌ಆರ್‌ಪಿ ಹೆಡ್ ಕಾನ್‌ಸ್ಟೇಬಲ್‌ ಮಗಳ ಈ ಸಾಧನೆಗೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕ (ಡಿಜಿಪಿ) ಪ್ರವೀಣ್‌ ಸೂದ್‌ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ‘ಕೆಎಸ್‌ಆರ್‌ಪಿ ಹೆಡ್ ಕಾನ್‌ಸ್ಟೇಬಲ್‌ ಅವರ ಮಗಳು ಬಿಂದು ಮಣಿ ಅವರನ್ನು ಸ್ವಾಗತಿಸಲು ನನಗೆ ಹೆಮ್ಮೆಯಾಗುತ್ತಿದೆ. ತನ್ನ ಮೊದಲ ಪ್ರಯತ್ನದಲ್ಲೇ ಸಿವಿಲ್ ಸರ್ವಿಸ್ ಪರೀಕ್ಷೆಯಲ್ಲಿ 468 ನೇ ರ‍್ಯಾಂಕ್‌ ಪಡೆದಿದ್ದಾರೆ. ಆಕೆಗೆ ಶುಭಾಶಯಗಳು ಮತ್ತು ಹೆಮ್ಮೆಯ ಪೋಷಕರಿಗೆ ಅಭಿನಂದನೆಗಳು’ ಎಂದು ಶುಭ ಹಾರೈಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು