ಶುಕ್ರವಾರ, ಏಪ್ರಿಲ್ 16, 2021
21 °C

ಮೇ ತಿಂಗಳಲ್ಲಿ ಫ್ಯಾಷನ್‌ ಶೋ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಡಿಎಚ್‌2 ಫ್ಯಾಷನ್‌ ಮೀಡಿಯಾ ಸಂಸ್ಥೆಯು ಮೇ ತಿಂಗಳಿನಲ್ಲಿ 2021ನೇ ಸಾಲಿನ ಟಾಪ್‌ ಸ್ಟಾರ್‌ ಮಾಡೆಲ್‌ ಫ್ಯಾಷನ್‌ ಶೋ ಕಾರ್ಯಕ್ರಮ ಹಮ್ಮಿಕೊಂಡಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಎಚ್‌2 ಫ್ಯಾಷನ್‌ ಸಂಸ್ಥೆಯ ನಿರ್ದೇಶಕಿ ಶ್ವೇತಾ ‘ಕೋವಿಡ್‌ ಕಾರಣ ಈ ಬಾರಿ ಕಾಲೇಜುಗಳಿಗೆ ಭೇಟಿ ನೀಡಲು ಆಗುತ್ತಿಲ್ಲ. ಹೀಗಾಗಿ ಆನ್‌ಲೈನ್‌ ಮತ್ತು ಆಫ್‌ಲೈನ್‌ನಲ್ಲೇ ಆಡಿಷನ್‌ ನಡೆಸುತ್ತಿದ್ದೇವೆ. ಇದರಲ್ಲಿ 30 ಮಂದಿಯನ್ನು ಆಯ್ಕೆ ಮಾಡುತ್ತೇವೆ. ಗೋವಾದಲ್ಲಿ ಕಾರ್ಯಕ್ರಮ ಆಯೋಜಿಸಿದ್ದೇವೆ. ವಿಜೇತರಿಗೆ ₹1 ಲಕ್ಷ ನಗದು ಬಹುಮಾನ ನೀಡಲಾಗುತ್ತದೆ’ ಎಂದರು.

‘ಬಿಗ್‌ಬಾಸ್‌ನಲ್ಲಿ ಭಾಗವಹಿಸಿದ್ದ ಸೋನು ಪಾಟೀಲ ಹಾಗೂ ಮಜಾ ಭಾರತ ಖ್ಯಾತಿಯ ಅವಿನಾಶ್‌ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ’ ಎಂದು ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.