ಬೆಂಗಳೂರು: ಲಿಂಗಾಯತ ಪಂಚಮಸಾಲಿ ಮಹಾ ರ್ಯಾಲಿ ನಂತರವೂ, ,2ಎ ಮೀಸಲಾತಿ ನೀಡುವ ಕುರಿತು ಯಾವುದೇ ಕ್ರಮಕ್ಕೆ ರಾಜ್ಯಸರ್ಕಾರ ಮುಂದಾಗದಿರುವುದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಸಮುದಾಯದ ಸದಸ್ಯರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಪಂಚಮಸಾಲಿ ಕೂಡಲಸಂಗಮ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಮಾತನಾಡಿ,
'ನಮ್ಮ ಜನಾಂಗದ ಮುಖ್ಯಮಂತ್ರಿಯವರು ನಮ್ಮ ಬೇಡಿಕೆಗೆ ಸ್ಪಂದಿಸುತ್ತಾರೆ ಎನ್ನುವ ಭರವಸೆ ಇತ್ತು. ಆದರೂ ಅವರಿಂದ ಯಾವುದೇ ಸ್ಪಂದನೆ ಸಿಗಲಿಲ್ಲ' ಎಂದು ಅಸಮಾಧಾನ ವ್ಯಕ್ತಪಡಿಸಿದರು.
'ಸರ್ಕಾರದ ಪರವಾಗಿ ಸಚಿವ ಸಿ.ಸಿ.ಪಾಟೀಲ ಹಾಗೂ ನಿರಾಣಿ ಸಮಾವೇಶಕ್ಕೆ ಬಂದು ಮನ ಒಲಿಸುವ ಪ್ರಯತ್ನ ಮಾಡಿದರು. ಇದಕ್ಕೆ ನಾವು ಒಪ್ಪಿಲ್ಲ. ಸಮುದಾಯದ ಜನರೂ ಧರಣಿ ಮಾಡುವಂತೆ ಒತ್ತಾಯಿಸಿದ್ದರಿಂದ ಪ್ರತಿಭಟನೆ ಮುಂದುವರಿಸಿದ್ದೇವೆ' ಎಂದರು.

ಇದನ್ನೂ ಓದಿ.. ಮೀಸಲಾತಿ ದೊರಕದೇ ಪೀಠಕ್ಕೆ ಮರಳುವುದಿಲ್ಲ: ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಘೋಷಣೆ

'ಅನೇಕ ಸಮಾವೇಶಗಳು ಹೋರಾಟಗಳು ಬೆಂಗಳೂರಿಗೆ ಬಂದ ತಕ್ಷಣ ಅಂತ್ಯ ಆಗುವುದನ್ನು ನೋಡಿದ್ದೇವೆ. ಆದರೆ ನಮ್ಮ ಹೋರಾಟ ಕೇವಲ ಭರವಸೆಗೆ ಮುಕ್ತಾಯವಾಗುವುದಿಲ್ಲ. ಮೀಸಲಾತಿ ಆದೇಶ ಪಡೆದೇ ಪೀಠಕ್ಕೆ ಮರಳುತ್ತೇನೆ' ಎಂದರು.
ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿರುವ ಪಂಚಮಸಾಲಿ ಸಮುದಾಯದ ನೂರಾರು ಜನ ಪ್ರತಿಭಟನೆ ಮುಂದುವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.