ಬುಧವಾರ, ಆಗಸ್ಟ್ 10, 2022
24 °C

ಡಯಾಲಿಸಿಸ್‌: ಖಾಸಗಿ ಸಂಸ್ಥೆ ಜತೆಗಿನ ಒಪ್ಪಂದ ರದ್ದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿನ ಡಯಾಲಿಸಿಸ್ ಘಟಕಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡುತ್ತಿಲ್ಲ ಎಂಬ ಕಾರಣಕ್ಕೆ ಬಿಆರ್‌ಎಸ್ ಏಜೆನ್ಸಿ ಜತೆಗಿನ ಒಪ್ಪಂದವನ್ನು ಆರೋಗ್ಯ ಇಲಾಖೆ ರದ್ದು ಮಾಡಿದೆ.

ಸರ್ಕಾರಿ ಆಸ್ಪತ್ರೆಗಳೇ ಇನ್ನುಮುಂದೆ ಡಯಾಲಿಸಿಸ್ ಘಟಕಗಳನ್ನು ನಿರ್ವಹಿಸಲಿವೆ. ಔಷಧ, ನೀರು, ವಿದ್ಯುತ್ ಸೇರಿದಂತೆ ಡಯಾಲಿಸಿಸ್‌ ಘಟಕಗಳಿಗೆ ಅಗತ್ಯವಿರುವ ಮೂಲಸೌಕರ್ಯವನ್ನು ಸಮರ್ಪಕವಾಗಿ ಒದಗಿಸದೆಯೇ ಬಿಆರ್‌ಎಸ್ ಏಜೆನ್ಸಿ ಸೇವೆ ಒದಗಿಸುತ್ತಿದೆ ಎಂಬ ದೂರು ಸಲ್ಲಿಕೆಯಾಗಿತ್ತು.  ಕೋವಿಡ್ ಕಾಣಿಸಿಕೊಂಡ ಬಳಿಕ ಚಿತ್ರದುರ್ಗ, ವಿಜಯಪುರ, ಕಲಬುರ್ಗಿ, ದಾವಣಗೆರೆ ಸೇರಿದಂತೆ ಕೆಲ ಜಿಲ್ಲೆಗಳಲ್ಲಿನ ಘಟಕಗಳಲ್ಲಿ ಸೇವೆ ವ್ಯತ್ಯಯವಾಗಿತ್ತು. ಕೆಲವು ಘಟಕಗಳು ತಾತ್ಕಾಲಿಕವಾಗಿ ಸ್ಥಗಿತವಾಗಿದ್ದವು.

ರೋಗಿಗಳೇ ಡಯಾಲಿಸಿಸ್‌ಗೆ ಅಗತ್ಯವಿರುವ ಔಷಧಗಳನ್ನು ತರಬೇಕಾದ ಪರಿಸ್ಥಿತಿ ಕೆಲವೆಡೆ ನಿರ್ಮಾಣವಾಗಿತ್ತು. ಈ ಸಮಸ್ಯೆ ಪರಿಹರಿಸುವಂತೆ ರೋಗಿಗಳು ಇಲಾಖೆಗೆ ಆಗ್ರಹಿಸಿದ್ದರು.

ಆರೋಗ್ಯ ಇಲಾಖೆಯ ಉಪ ನಿರ್ದೇಶಕ ಡಾ. ಎಂ. ಸೆಲ್ವರಾಜನ್, ಡಯಾಲಿಸಿಸ್‌ ಘಟಕಗಳ ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಪತ್ರ ಬರೆದಿದ್ದು, ಏಜೆನ್ಸಿಯು ಗುಣಮಟ್ಟದ ಡಯಾಲಿಸಿಸ್ ಸೇವೆ ಒದಗಿಸುವಲ್ಲಿ ವಿಫಲವಾಗಿದೆ. ಹಾಗಾಗಿ, ನಿರ್ವಹಣೆಯನ್ನು ಏಜೆನ್ಸಿಯಿಂದ ಹಿಂಪಡೆಯಲಾಗಿದೆ. ಸದ್ಯಕ್ಕೆ ಆಯಾ ಆಸ್ಪತ್ರೆಗಳೇ ನಿರ್ವಹಣೆ ಮಾಡಬೇಕಿದೆ. ಅಗತ್ಯ ಅನುದಾನ ಒದಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು