ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸ್ಪೃಶ್ಯರ ಅವಹೇಳನ ಮಾಡಿಲ್ಲ: ಎಚ್‌ಡಿಕೆ ಸ್ಪಷ್ಟನೆ

Last Updated 2 ಡಿಸೆಂಬರ್ 2022, 17:42 IST
ಅಕ್ಷರ ಗಾತ್ರ

ತುಮಕೂರು: ‘ಅಸ್ಪೃಶ್ಯರ ಬಗ್ಗೆನಾನು ಅವಹೇಳನಕಾರಿಯಾಗಿ ಮಾತನಾಡಿಲ್ಲ. ಬಿಜೆಪಿ ಆಡಳಿತದಲ್ಲಿ ಮುಸ್ಲಿಂ ಸಮುದಾಯವನ್ನು ಹೇಗೆ ನಡೆಸಿಕೊಳ್ಳುತ್ತಿದೆ ಎಂಬರ್ಥದಲ್ಲಿ ಮಾತನಾಡಿದ್ದೇನೆ’ ಎಂದು ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

‘ಜೆಡಿಎಸ್‌ ಅಧಿಕಾರಕ್ಕೆ ಬಂದಲ್ಲಿ ಸಿ.ಎಂ.ಇಬ್ರಾಹಿಂ ಏಕೆ ಮುಖ್ಯಮಂತ್ರಿ ಆಗಬಾರದು. ಅವರೇನು ಅಸ್ಪೃಶ್ಯರೆ’ ಎಂದು ಅವರು ಪ್ರಶ್ನಿಸಿದ್ದರು. ಈ ಸಂಬಂಧ ಕುಮಾರಸ್ವಾಮಿ ವಿರುದ್ಧ ಛಲವಾದಿ ಮಹಾಸಭಾವು ದೊಡ್ಡಬಳ್ಳಾಪುರ ನಗರ ಪೊಲೀಸ್‌ ಠಾಣೆಯಲ್ಲಿ ದೂರು ಸಲ್ಲಿಸಿರುವ ಹಿನ್ನೆಲೆಯಲ್ಲಿ ಅವರು, ನಗರ ಹೊರವಲಯದ ದಿಬ್ಬೂರಿನಲ್ಲಿ ಶುಕ್ರವಾರ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದರು.

‘ಜೆಡಿಎಸ್‌ನಲ್ಲಿ ಎಲ್ಲದ್ದಕ್ಕೂ ಮುಕ್ತ ಅವಕಾಶವಿದೆ. ಪಕ್ಷ ಅಧಿಕಾರಕ್ಕೆ ಬಂದರೆ ದಲಿತರಿಗೂ ಮುಖ್ಯಮಂತ್ರಿ ಆಗುವ ಅವಕಾಶ ಸಿಗಲಿದೆ’ ಎಂದು ಅವರು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT