ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೊಬೈಲ್ ಬಳಕೆಯಲ್ಲಿ ಡಿಜಿಟಲ್‌ ಕ್ರಾಂತಿ: ಅಶ್ವತ್ಥನಾರಾಯಣ

Last Updated 4 ಆಗಸ್ಟ್ 2022, 21:00 IST
ಅಕ್ಷರ ಗಾತ್ರ

ಬೆಂಗಳೂರು:ದೇಶದಲ್ಲಿ 100 ಕೋಟಿ ಜನರು ಮೊಬೈಲ್ ಬಳಸುತ್ತಿದ್ದು, ಕೃಷಿ ಸೇರಿದಂತೆ ಎಲ್ಲಾ ಕ್ಷೇತ್ರಗಳಿಗೂ ಡಿಜಿಟಲ್ ಮಾರುಕಟ್ಟೆ ಸೃಷ್ಟಿಸಲು ಹಾಗೂ ವಿಸ್ತರಿಸಲು ರಾಜ್ಯ ಸರ್ಕಾರ ಹಲವು ಉಪಕ್ರಮ ಕೈಗೊಂಡಿದೆ ಎಂದುಐಟಿ, ಬಿಟಿ ಸಚಿವ ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ನಗರದಲ್ಲಿ ಗುರುವಾರ ನಡೆದ 'ಭಾರತ: ಪ್ರವರ್ಧಮಾನಕ್ಕೆ ಬರುತ್ತಿರುವ ‘ವೈಮಾಂತರಿಕ್ಷ ವಿದ್ಯುನ್ಮಾನ ಕ್ಷೇತ್ರ' ಸಮಾವೇಶದಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ ಸೆಮಿಕಂಡಕ್ಟರ್‌, ವಿದ್ಯುನ್ಮಾನ ಕ್ಷೇತ್ರಗಳಿಗೆ ಆದ್ಯತೆ ನೀಡಲಾಗಿದೆ. ಹುಬ್ಬಳ್ಳಿ- ಧಾರವಾಡ, ಶಿವಮೊಗ್ಗ ಮತ್ತು ಮೈಸೂರುಗಳನ್ನು ವಿಶೇಷ ಹೂಡಿಕೆ ವಲಯಗಳಾಗಿ ಗುರುತಿಸಲಾಗಿದೆ. ಮೈಸೂರಿನಲ್ಲಿ ಸೆಮಿಕಂಡಕ್ಟರ್ ಅಭಿವೃದ್ಧಿ ಕೇಂದ್ರವನ್ನು ಸ್ಥಾಪಿಸಲುಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT