ಬೆಂಗಳೂರು: ಆಮ್ ಆದ್ಮಿ ಪಕ್ಷದ(ಎಎಪಿ) ಕರ್ನಾಟಕ ಚುನಾವಣಾ ಉಸ್ತುವಾರಿಯಾಗಿ ದೆಹಲಿಯ ಶಾಸಕ ದಿಲೀಪ್ ಪಾಂಡೆ ನೇಮಕಗೊಂಡಿದ್ದಾರೆ.

ಉತ್ತರಪ್ರದೇಶದ ದಿಲೀಪ್ ಪಾಂಡೆ ಅವರು 2011ರಲ್ಲಿ ಅಣ್ಣಾ ಹಜಾರೆ ನೇತೃತ್ವದಲ್ಲಿ ನಡೆದ ಭ್ರಷ್ಟಾಚಾರ ವಿರೋಧಿ ಸತ್ಯಾಗ್ರಹದಲ್ಲಿ ಭಾಗಿಯಾಗಿದ್ದರು. ನಂತರ ಅರವಿಂದ್ ಕೇಜ್ರಿವಾಲ್ ಅವರು ಪಕ್ಷ ಕಟ್ಟಿದಾಗ ಆಮ್ ಆದ್ಮಿ ಪಕ್ಷ ಸೇರ್ಪಡೆಯಾದರು. 2015ರಲ್ಲಿ ಪಕ್ಷದ ದೆಹಲಿ ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕಗೊಂಡಿದ್ದರು. ದೆಹಲಿಯ ತಿಮಾರ್ಪುರ ಕ್ಷೇತ್ರದ ಶಾಸಕರಾಗಿ, ದೆಹಲಿ ವಿಧಾನಸಭೆಯ ಮುಖ್ಯ ಸಚೇತಕ ಹಾಗೂ ಎಎಪಿ ವಕ್ತಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.