ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ದಮ್ಕಿ ಹಾಕಲು ಬಿಜೆಪಿ ಯತ್ನ’: ಕಾಂಗ್ರೆಸ್‌ ಮುಖಂಡ ದಿನೇಶ್‌ ಗುಂಡೂರಾವ್‌

Last Updated 13 ಅಕ್ಟೋಬರ್ 2022, 12:27 IST
ಅಕ್ಷರ ಗಾತ್ರ

ಕೋನಸಾಗರ (ಚಿತ್ರದುರ್ಗ): ಮೋದಿ ಬಗ್ಗೆ ಹಗುರವಾಗಿ ಮಾತನಾಡಬೇಡಿ ಎಂದು ಹೇಳುವ ಮೂಲಕ ಬಿಜೆಪಿ ದಮ್ಕಿ ಹಾಕುವ ಪ್ರಯತ್ನ ಮಾಡುತ್ತಿದೆ. ಇದು ಪ್ರಜಾಪ್ರಭುತ್ವ ರಾಷ್ಟ್ರ ಎಂಬುದನ್ನು ಮರೆತಿದೆ ಎಂದು ಕಾಂಗ್ರೆಸ್‌ ಮುಖಂಡ ದಿನೇಶ್‌ ಗುಂಡೂರಾವ್‌ ಆಕ್ರೋಶ ವ್ಯಕ್ತಪಡಿಸಿದರು.

‘ಬಿ.ಎಸ್‌.ಯಡಿಯೂರಪ್ಪ ಅವರು ಹಿರಿಯ ರಾಜಕಾರಣಿ. ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ರಾಜಕೀಯ ಟೀಕೆ ಮಾಡುವಾಗ ನಾಲಿಗೆ ಮೇಲೆ ಹಿಡಿತ ಇರಬೇಕು. ಇಂತಹ ಹೇಳಿಕೆ ಯಡಿಯೂರಪ್ಪ ಅವರಿಗೆ ಶೋಭೆ ತರುವುದಿಲ್ಲ. ಕರ್ನಾಟಕದ ಸಂಸ್ಕೃತಿಗೆ ಗೌರವ ತರುವುದಿಲ್ಲ’ ಎಂದು ಹೇಳಿದರು.

‘ಬಿಜೆಪಿ ನಾಯಕರು ಅಧಿಕಾರ ಇಟ್ಟುಕೊಟ್ಟುಕೊಂಡು ಹೆದರಿಸಲು ಪ್ರಯತ್ನಿಸುತ್ತಿದ್ದಾರೆ. ಆದಾಯ ತೆರಿಗೆ, ಜಾರಿ ನಿರ್ದೇಶನಾಲಯ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ದೇಶದ ಎಲ್ಲ ಕ್ಷೇತ್ರಗಳನ್ನು ತನ್ನ ಹಿಡಿತಕ್ಕೆ ತೆಗೆದುಕೊಳ್ಳಲು ಹವಣಿಸುತ್ತಿದೆ’ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT