ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

4ಜಿ ವಿನಾಯಿತಿ: ಕಮಿಷನ್ ಎಷ್ಟು?: ದಿನೇಶ್ ಗುಂಡೂರಾವ್

ದಿನೇಶ್‌ ಗುಂಡೂರಾವ್‌ ಪ್ರಶ್ನೆ
Last Updated 9 ಡಿಸೆಂಬರ್ 2021, 20:45 IST
ಅಕ್ಷರ ಗಾತ್ರ

ಬೆಂಗಳೂರು: ಬಿಬಿಎಂಪಿಯ ಮಹದೇವಪುರ ವಲಯ ವ್ಯಾಪ್ತಿಯಲ್ಲಿ 110 ಹಳ್ಳಿಗಳಿಗೆ ಮೂಲಸೌಕರ್ಯ ಕಲ್ಪಿಸುವ ಯೋಜನೆಯಡಿ ಕೈಗೆತ್ತಿಕೊಳ್ಳುವ ರಸ್ತೆ ಕಾಮಗಾರಿಗೆ ಹೆಚ್ಚುವರಿಯಾಗಿ ₹119.62 ಕೋಟಿ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಟೆಂಡರ್‌ ಕರೆಯದೇ ಕಾಮಗಾರಿ
ನಿರ್ವಹಿಸುವ ಸಲುವಾಗಿ ಕೆಟಿಪಿಪಿ ಕಾಯ್ದೆಯಡಿ 4 ಜಿ ವಿನಾಯಿತಿ ಕೋರಿರುವುದನ್ನು ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಅವರು ಟೀಕಿಸಿದ್ದಾರೆ.

ಈ ಕುರಿತು ಗುರುವಾರ ಟ್ವೀಟ್‌ ಮಾಡಿರುವ ಅವರು, ‘ಮಹದೇವಪುರ ವಲಯದ ರಸ್ತೆ ಕಾಮಗಾರಿಗೆ ಹೆಚ್ಚುವರಿ ₹119.82 ಕೋಟಿ ಅನುದಾನದ ಪ್ರಸ್ತಾವನೆ ಸಲ್ಲಿಸಲಾಗಿದೆ. ತಮ್ಮ ಹಿಂಬಾಲಕರಿಗೆ ಅಕ್ರಮ ತುಂಡು ಗುತ್ತಿಗೆ ನೀಡಲು ಈ ಕಾಮಗಾರಿಗಳಿಗೆ ಟೆಂಡರ್ ಕರೆಯದೇ, 4ಜಿ ವಿನಾಯತಿ ಕೇಳಲಾಗಿದೆ. ಟೆಂಡರ್ ಕರೆದರೆ ಶೇ 40 ರಷ್ಟು ಕಮಿಷನ್ ಕೊಡಬೇಕು. 4ಜಿ ವಿನಾಯತಿ ಪಡೆದರೆ ಎಷ್ಟು ಕಮಿಷನ್, ಯಾರಿಗೆ ಎಷ್ಟು ಪಾಲು’ ಎಂದು ಪ್ರಶ್ನಿಸಿದ್ದಾರೆ.

‘110 ಹಳ್ಳಿಗಳ ರಸ್ತೆ ಕಾಮಗಾರಿಗೆ 4ಜಿ ವಿನಾಯಿತಿ’ ಶೀರ್ಷಿಕೆಯಡಿ ‘ಪ್ರಜಾವಾಣಿ’ಯು ಗುರುವಾರದ ಸಂಚಿಕೆಯಲ್ಲಿ ವಿಶೇಷ ವರದಿ ಪ್ರಕಟಿಸಿ ಗಮನ ಸೆಳೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT