ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಡಿಯೊ ಕಾನ್ಫರೆನ್ಸ್ ವ್ಯವಸ್ಥೆ ಕಲ್ಪಿಸಲು ನಿರ್ದೇಶನ

Last Updated 3 ಜುಲೈ 2021, 21:41 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲಾ ಮತ್ತು ಅಧೀನ ನ್ಯಾಯಾಲಯಗಳಲ್ಲಿ ಉನ್ನತ ತಂತ್ರಜ್ಞಾನ ಆಧಾರಿತ ವಿಡಿಯೊ ಕಾನ್ಫರೆನ್ಸ್ ವಿಚಾರಣಾ ವ್ಯವಸ್ಥೆ ಒದಗಿಸುವ ಅಗತ್ಯ ಇದೆ ಎಂದು ಹೈಕೋರ್ಟ್ ಹೇಳಿದೆ.

ಸ್ವಯಂ ‍ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ‍ಪೀಠ, ‘ಹೈಕೋರ್ಟ್‌ ಆಡಳಿತ ಸಲ್ಲಿಸಿರುವ ಪ್ರಸ್ತಾವನೆಯನ್ನು ಕೂಡಲೇ ಪರಿಗಣಿಸಬೇಕು’ ಎಂದು ಆದೇಶಿಸಿತು.

ಕೋವಿಡ್ ಮೂರನೇ ಅಲೆ ಸಾಧ್ಯತೆ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಮೂರನೇ ಅಲೆ ಎದುರಿಸಲು ನ್ಯಾಯಾಂಗ ವ್ಯವಸ್ಥೆ ಕೂಡ ಸಿದ್ಧವಾಗಿರಬೇಕಾಗುತ್ತದೆ. ಹಾಗಾಗಿ, ಸುಸಜ್ಜಿತ ವಿಡಿಯೊ ಕಾನ್ಫರೆನ್ಸ್ ವ್ಯವಸ್ಥೆ ಕಲ್ಪಿಸಬೇಕಾಗುತ್ತದೆ ಎಂದು ಹೇಳಿತು.

ಎಲ್ಲಾ ನ್ಯಾಯಾಲಯಗಳಿಗೆ ಪರವಾನಗಿ ಪಡೆದ ಜೂಮ್ ಆ್ಯಪ್ ಒದಗಿಸಬೇಕು. ಈ ವ್ಯವಸ್ಥೆ ಹೈಕೋರ್ಟ್‌ ಪೀಠಗಳಲ್ಲಿ ಈ ವ್ಯವಸ್ಥೆ ಯಶಸ್ವಿಯಾಗಿ ಬಳಕೆಯಾಗುತ್ತಿದೆ. ಎಲ್ಲಾ ಜಿಲ್ಲೆಯಲ್ಲೂ ಸುಸಜ್ಜಿತ ವ್ಯವಸ್ಥೆ ಕಲ್ಪಿಸುವ ಸಂಬಂಧ ಪ್ರಸ್ತಾವನೆ ಸಿದ್ಧಪಡಿಸಲು ಹೈಕೊರ್ಟ್‌ನ ಕಂಪ್ಯೂಟರ್ ಸಮಿತಿಗೆ ಪೀಠ ನಿರ್ದೇಶನ ನೀಡಿತು.

‘ಎಲ್ಲಾ ನ್ಯಾಯಾಲಯಗಳಿಗೆ ಉತ್ತಮವಾದ ವಿಡಿಯೊ ಕಾನ್ಫರೆನ್ಸ್ ವ್ಯವಸ್ಥೆ ಕಲ್ಪಿಸಲಾಗಿದೆಯೇ ಎಂಬುದನ್ನು ಸರ್ಕಾರ ಖಚಿತಪಡಿಸಿಕೊಳ್ಳಬೇಕು. ಆ ಮೂಲಕ ರಾಜ್ಯದ ನ್ಯಾಯಾಲಯಗಳು ಇತರ ರಾಜ್ಯಗಳ ನ್ಯಾಯಾಲಯಗಳಿಗೆ ಪಾರದರ್ಶಕ ಆಗಬಹುದು’ ಎಂದು ಪೀಠ ಅಭಿಪ್ರಾಯಪಟ್ಟಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT