ಬೆಂಗಳೂರು: ಚಿತ್ರ ನಿರ್ದೇಶಕ ಕಿರಣ್ ಗೋವಿ(50) ಶನಿವಾರ ಮಧ್ಯಾಹ್ನ ಹೃದಯಾಘಾತದಿಂದ ನಿಧನರಾದರು. ಅವರಿಗೆ ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳು ಇದ್ದಾರೆ.
ಕಚೇರಿಯಲ್ಲಿ ಅವರ ಮುಂದಿನ ಚಿತ್ರ ‘ಜಸ್ಟೀಸ್’ನ ಬರಹದಲ್ಲಿದ್ದ ವೇಳೆ ಗೋವಿ ಅವರಿಗೆ ಹೃದಯಾಘಾತವಾಯಿತು. ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ, ಆಗಲೇ ಮೃತಪಟ್ಟಿರುವುದನ್ನು ವೈದ್ಯರು ದೃಢಪಡಿಸಿದರು.
ಸಿನಿಪಯಣ: 2008ರಲ್ಲಿ ತೆರೆಕಂಡ ‘ಪಯಣ’ ಚಿತ್ರದ ಮೂಲಕ ಅವರು ನಿರ್ದೇಶಕರಾಗಿ ಪದಾರ್ಪಣೆ ಮಾಡಿದ್ದರು. ರವಿಶಂಕರ್ ಗೌಡ ನಾಯಕ ನಟರಾಗಿ ನಟಿಸಿದ್ದ ‘ಪಯಣ’ ಸಿನಿಮಾ ಹಿಟ್ ಆಗಿತ್ತು. ‘ಸಂಚಾರಿ’, ‘ಪಾರು ವೈಫ್ ಆಫ್ ದೇವದಾಸ್’, ‘ಯಾರಿಗೆ ಯಾರುಂಟು’ ಸಿನಿಮಾಗಳನ್ನು ನಿರ್ದೇಶಿಸಿದ್ದರು.
‘ಸಂಚಾರಿ’ ತೆಲುಗಿಗೆ ರಿಮೇಕ್ ಆಗಿತ್ತು. ಭಾನುವಾರ ಬೆಂಗಳೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.