ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂರನೇ ಅಲೆ ಎದುರಿಸಲು ಸಿದ್ಧತೆ: ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ

Last Updated 6 ಆಗಸ್ಟ್ 2021, 21:15 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್ ಮೂರನೇ ಅಲೆ ಎದುರಿಸಲು 2021–22ನೇ ಸಾಲಿನ ರಾಜ್ಯ ವಿಪತ್ತು ನಿರ್ವಹಣಾ ಯೋಜನೆಯಡಿ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ವಿಪತ್ತು ನಿರ್ವಹಣಾ ಕಾಯ್ದೆಯ ನಿಯಮಗಳ ಜಾರಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಯೋಜನೆ ಸಿದ್ಧಪಡಿಸಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಂದೆ ಅನುಮೋದನೆಗಾಗಿ ಇಡಲಾಗಿದೆ ಎಂದು ಸರ್ಕಾರದ ಪರ ವಕೀಲರು ವಿವರಿಸಿದರು.

‘ಜಿಲ್ಲಾ ವಿಪತ್ತು ಪರಿಹಾರ ನಿಧಿ ರಚನೆ ಮಾಡುವ ಸಂಬಂಧ ಅನುಸರಿಸಿರುವ ಕ್ರಮಗಳ ಕುರಿತು ಅಂಕಿ–ಅಂಶ ಸಹಿತ ಮಾಹಿತಿಯನ್ನು ಎಲ್ಲಾ ಜಿಲ್ಲಾಧಿಕಾರಿಗಳಿಂದ ತರಿಸಿಕೊಳ್ಳಬೇಕು’ ಎಂದು ಪೀಠ ನಿರ್ದೇಶನ ನೀಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT