ಮಂಗಳವಾರ, ಏಪ್ರಿಲ್ 20, 2021
32 °C

ಕೋವಿಡ್ ಲಸಿಕೆ ಉಚಿತವಾಗಿ ವಿತರಿಸಿ: ಪ್ರಧಾನಿಗೆ ಸಿದ್ದರಾಮಯ್ಯ ಪತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಕೋವಿಡ್ ಲಸಿಕೆ ಸಾರ್ವಜನಿಕರಿಗೆ ಉಚಿತವಾಗಿ ವಿತರಿಸಬೇಕು’ ಎಂದು ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ದೇಶದಾದ್ಯಂತ ಕೋವಿಡ್‌ ಲಸಿಕೆ ಅಭಿಯಾನ ಆರಂಭವಾಗಿದೆ. ಆದರೆ ಜನಸಾಮಾನ್ಯರಿಗೆ ವಾಕ್ಸಿನ್ ದರ ನಿಗದಿ ಮಾಡಲಾಗಿದೆ. ವ್ಯಾಕ್ಸಿನ್‌ಗೆ ಹಣ ಪಡೆಯದೆ ಉಚಿತವಾಗಿ ನೀಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

‘ಕೋವಿಡ್‌ನಿಂದ ಜನಸಾಮಾನ್ಯರು ಸಂಕಷ್ಟದಲ್ಲಿದ್ದಾರೆ. ಇಂಥ ಸಂದರ್ಭದಲ್ಲಿ ಲಸಿಕೆ ನಿರೀಕ್ಷೆ ಹುಟ್ಟಿಸಿದೆ. ಆದರೆ, ಲಸಿಕೆ ವಿತರಣೆ ಅಭಿಯಾನ ನಿಧಾನಗತಿಯಲ್ಲಿ ಸಾಗುತ್ತಿದೆ. ಈವರೆಗೆ ದೇಶದ ಜನಸಂಖ್ಯೆಯ ಒಟ್ಟು ಶೇ.0.5 ರಷ್ಟು ಮಂದಿಗೆ ಮಾತ್ರ ಲಿಸಿಕೆ ಸಿಕ್ಕಿದೆ’ ಎಂದೂ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

‘ಇಸ್ರೇಲ್ ಶೇ 36, ಅಮೆರಿಕ ಶೇ 6, ಇಂಗ್ಲೆಂಡ್‌ ಶೇ 4ರಷ್ಟು ಜನಸಂಖ್ಯೆಗೆ ಕೋವಿಡ್ ಲಸಿಕೆ ವಿತರಿಸಿದೆ. ಬ್ರೆಜಿಲ್, ಕೆನಡಾ, ಅಮೆರಿಕ, ಬ್ರಿಟನ್‌ ಸೇರಿದಂತೆ ಹಲವು ದೇಶಗಳು ಉಚಿತವಾಗಿ ಲಸಿಕೆಯನ್ನು ಜನರಿಗೆ ನೀಡಿವೆ. ಆದರೆ, ಭಾರತದಲ್ಲಿ ಜನಸಾಮಾನ್ಯರಿಗೆ ₹ 250 ದರ ವಸೂಲಿ ಮಾಡಲು ಅನುಮತಿ ನೀಡಿದೆ. ಈ ಬಗ್ಗೆ ಪ್ರಧಾನಿ  ಸೂಕ್ತ ಕ್ರಮ ಕೈಗೊಂಡು ಲಸಿಕೆ ಉಚಿತವಾಗಿ ಜನಸಾಮಾನ್ಯರಿಗೆ ದೊರಕುವಂತೆ ಮಾಡಬೇಕು. ಪಿಎಂ ಕೇರ್ಸ್‌ ನಿಧಿಯನ್ನು ಲಸಿಕೆಗೆ ಬಳಕೆ ಮಾಡಿ’ ಎಂದೂ ಅವರು ಹೇಳಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು