ಅಕ್ರಮ ಗಣಿಗಾರಿಕೆ ತಡೆ: ಜಿಲ್ಲಾಧಿಕಾರಿಗೆ ಅಧಿಕಾರ

-ಮಂಡ್ಯ ಜಿಲ್ಲೆ ಪಾಂಡವ ಪುರದ ಬೇಬಿಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆಯಿಂದ ಕೆಆರ್‌ಎಸ್ ಜಲಾಶಯಕ್ಕೆ ಅಪಾಯ ಎದುರಾಗಿದೆ. ಬೇಬಿಬೆಟ್ಟ ಸೇರಿದಂತೆ ರಾಜ್ಯದಲ್ಲಿ ಎಲ್ಲ ಅಕ್ರಮ ಗಣಿಗಾರಿಕೆಗಳನ್ನೂ ತಕ್ಷಣ ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿ
ಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ನಗರದಲ್ಲಿ ಅವರು ಭಾನುವಾರ ಸುದ್ದಿಗಾರರ ಜತೆ ಮಾತನಾಡಿದರು.
ಅಕ್ರಮ ಗಣಿಗಾರಿಕೆಗೆ ಅವಕಾಶ ನೀಡಬಾರದು. ಪರವಾನಗಿಗೆ ಅರ್ಜಿ ಸಲ್ಲಿಸಿದ ಬಳಿಕ, ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಕಾನೂನು ಚೌಕಟ್ಟಿನಲ್ಲಿ ಅನುಮತಿ ನೀಡಬಹುದು. ಅಕ್ರಮ ಕಂಡುಬಂದರೆ ಅಧಿಕಾರಿಗ ಳನ್ನೇ ಹೊಣೆ ಮಾಡಲಾಗುವುದು. ಸಾಂಪ್ರದಾಯಿಕವಾಗಿ ಕಲ್ಲುಗಳನ್ನು ಒಡೆದು ಜಲ್ಲಿ ಮಾಡುವವರನ್ನು ಪ್ರೋತ್ಸಾಹಿಸಬೇಕು. ಅಭಿವೃದ್ಧಿ ಕಾಮಗಾರಿಗಳಿಗೆ ಜಲ್ಲಿಯ ಕೊರತೆಯಾಗದಂತೆ ನೋಡಿ ಕೊಳ್ಳಬೇಕು ಎಂದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.