ಭಾನುವಾರ, ಜುಲೈ 3, 2022
25 °C

ಜಿಲ್ಲೆಗಳಲ್ಲೂ ಸರ್ಕಾರದಿಂದಲೇ ಅಸ್ಥಿ ವಿಸರ್ಜನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್‌ನಿಂದ ಮೃತಪಟ್ಟವರ ಅಸ್ಥಿಯನ್ನು ಅವರ ವಾರಸುದಾರರು 15 ದಿನಗಳೊಳಗೆ ಪಡೆಯದಿದ್ದರೆ ಸರ್ಕಾರದಿಂದಲೇ ಗೌರವಯುತವಾಗಿ ಅಸ್ಥಿ ವಿಸರ್ಜಿಸುವ ಕ್ರಮವನ್ನು ಎಲ್ಲ ಜಿಲ್ಲೆಗಳಲ್ಲೂ ಜಾರಿಗೆ ತರುವಂತೆ  ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್‌. ಮಂಜುನಾಥ್‌ ಪ್ರಸಾದ್‌ ಗುರುವಾರ ಆದೇಶ ಹೊರಡಿಸಿದ್ದಾರೆ.

ಎಲ್ಲ ಜಿಲ್ಲೆಗಳಲ್ಲೂ ಕೋವಿಡ್‌ನಿಂದ ಮೃತಪಟ್ಟವರ ಶವಗಳನ್ನು ದಹಿಸಿದ ಬಳಿಕ 15 ದಿನಗಳವರೆಗೂ ಅಸ್ಥಿಯನ್ನು ಕಾಯ್ದಿರಿಸಬೇಕು. ಅಲ್ಲಿಯವರೆಗೂ ವಾರಸುದಾರರು ಬಂದು ಅಸ್ಥಿ ಪಡೆಯದಿದ್ದರೆ ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ ಮತ್ತು ತಹಶೀಲ್ದಾರರು ಗೌರವಯುತವಾಗಿ ವಿಸರ್ಜಿಸಬೇಕು ಎಂದು ಸೂಚಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು