ಜನರ ಬವಣೆ ಹೆಚ್ಚಿಸಿದ ಬಿಜೆಪಿ ಸರ್ಕಾರ: ಡಿ.ಕೆ. ಶಿವಕುಮಾರ ವಾಗ್ದಾಳಿ

ಮಂಗಳೂರು: ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರಗಳು ದಿನಕ್ಕೊಂದು ಕಾನೂನು ಜಾರಿಗೊಳಿಸುವ ಮೂಲಕ ಜನರ ಬವಣೆ ಹೆಚ್ಚಿಸುತ್ತಿವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.
ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚುತ್ತಿದೆ. ಈ ಹಿಂದೆ ಬೆಲೆ ಏರಿಕೆ ಬಗ್ಗೆ ಮಾತನಾಡುತ್ತಿದ್ದ ಈಗಿನ ಸಚಿವರು ಏನು ಹೇಳುತ್ತಾರೆ ಕೇಳಿ ಎಂದು ಮಾಧ್ಯಮದವರಿಗೆ ಸಲಹೆ ನೀಡಿದರು.
ಬೀಡಿ ಕಾರ್ಮಿಕರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಜನರು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ್ದಾರೆ. ₹20 ಲಕ್ಷ ಕೋಟಿ ಬಿಡುಗಡೆ ಮಾಡಿದ್ದಾಗಿ ಹೇಳಿದ ಬಿಜೆಪಿಯವರು, ಯಾವ ವರ್ಗದ ಜನರಿಗೆ ಎಷ್ಟು ಹಣ ಕೊಟ್ಟಿದ್ದಾರೆ ಎಂಬುದರ ದಾಖಲೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.