ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವೇಗೌಡರ ಬಗ್ಗೆ ಹಗುರ ಮಾತು: ಕ್ಷಮೆ ಕೋರಲು ರಾಜಣ್ಣಗೆ ಡಿಕೆಶಿ ಸೂಚನೆ

ಅಕ್ಷರ ಗಾತ್ರ

ನವದೆಹಲಿ: 'ದೇವೇಗೌಡರ ಬಗ್ಗೆ ಮಾಜಿ ಶಾಸಕ ಕೆ.ಎನ್. ರಾಜಣ್ಣ ನೀಡಿರುವ ಹೇಳಿಕೆ ಖಂಡನೀಯ, ಅಮಾನವೀಯ. ಕೂಡಲೇ ಅವರು ದೇವೇಗೌಡರ ಕ್ಷಮೆ ಕೇಳುವಂತೆ ಸೂಚನೆ ನೀಡುತ್ತೇನೆ ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ದೆಹಲಿಯಲ್ಲಿರುವಡಿಕೆಶಿ ಈ ಸಂಬಂಧ ವಿಡಿಯೊ ಸಂದೇಶ ಬಿಡುಗಡೆ ಮಾಡಿದ್ದಾರೆ.

'ದೇವೇಗೌಡರ ಪರಿಸ್ಥಿತಿ ಬಗ್ಗೆ ರಾಜಣ್ಣ ಅವರು ಆಡಿರುವ ಮಾತನ್ನು ಕಾಂಗ್ರೆಸ್ ಖಂಡಿಸುತ್ತದೆ. ಪಕ್ಷದ ನಾಯಕನಾಗಿ, ವ್ಯಯಕ್ತಿಕವಾಗಿಯೂ ಇದನ್ನು ಖಂಡಿಸುತ್ತೇನೆ. ಯಾರೇ ನಾಯಕರು ಮಾನವೀಯತೆ ಮೆರೆಯಬೇಕು. ಸಮಾಜ ಹಾಗೂ ದೇಶಕ್ಕೆ ಸೇವೆ ಮಾಡಿರುವ ಹಿರಿಯ ನಾಯಕರಾದ ದೇವೇಗೌಡರ ಬಗ್ಗೆ ಇಂತಹ ಹೇಳಿಕೆ ನೀಡಿದ್ದು ಸರಿಯಲ್ಲ. ದೇವೇಗೌಡರು ಪ್ರಧಾನಿಯಾಗಲು ಹಿಂದೆ ಕಾಂಗ್ರೆಸ್ ಪಕ್ಷವೇ ಬೆಂಬಲ ನೀಡಿತ್ತು. ನಾವು ದೇವೇಗೌಡರನ್ನು ಬಹಳ ಗೌರವಯುತವಾಗಿ ಕಾಣುತ್ತಿದ್ದೇವೆ. ಅವರ ಆರೋಗ್ಯದ ಬಗ್ಗೆ ಈ ರೀತಿ ಮಾತನಾಡುವುದು ಸರಿಯಲ್ಲ. ನಾನು ಕೂಡಲೇ ರಾಜಣ್ಣ ಅವರಿಗೆ ದೂರವಾಣಿ ಕರೆ ಮಾಡಿ, ಕ್ಷಮೆ ಕೋರುವಂತೆ ಸೂಚನೆ ನೀಡುತ್ತೇನೆ. ಇಂತಹ ಹೇಳಿಕೆಗಳಿಗೆ ನಾವು ಅವಕಾಶ ನೀಡುವುದಿಲ್ಲ. ಪೂಜ್ಯರಾದ ದೇವೇಗೌಡರಿಗೆ ಉತ್ತಮ ಆರೋಗ್ಯ ಮತ್ತು ಇನ್ನಷ್ಟು ಸೇವೆ ಮಾಡುವ ಅವಕಾಶವನ್ನು ದೇವರು ಕರುಣಿಸಲಿ ಎಂದು ನಾವು ಪ್ರಾರ್ಥನೆ ಮಾಡುತ್ತೇವೆ' ಎಂದು ಶಿವಕುಮಾರ್ ಅವರು ತಿಳಿಸಿದ್ದಾರೆ.

ರಾಜಣ್ಣ ಕೂಡಲೇ ಕ್ಷಮೆ ಕೇಳಬೇಕು: ಡಿ.ಕೆ. ಸುರೇಶ್

'ದೇವೇಗೌಡರ ಹಿರಿತನಕ್ಕೆ ನಾವೆಲ್ಲರೂ ತಲೆಬಾಗಬೇಕು. ಸಮಾಜದ ಹಿರಿಯರ ಬಗ್ಗೆ ಇಂತಹ ಹಗುರ ಹೇಳಿಕೆ ನೀಡಿರುವುದು ರಾಜಣ್ಣ ಅವರ ಘನತೆಗೆ ತಕ್ಕುದಲ್ಲ. ರಾಜಣ್ಣ ಅವರು ಕೂಡಲೇ ಕ್ಷಮೆ ಕೋರಬೇಕು. ಇದು ಅವರ ವೈಯಕ್ತಿಕ ಹೇಳಿಕೆಯಾದರೂ, ಅವರು ಕ್ಷಮೆ ಕೋರಬೇಕು. ಇಲ್ಲದಿದ್ದರೆ ಸಮಾಜ ಅವರನ್ನು ಸುಮ್ಮನೆ ಬಿಡುವುದಿಲ್ಲ’ ಎಂದು ಕಾಂಗ್ರೆಸ್‌ ಸಂಸದ ಡಿ.ಕೆ ಸುರೇಶ್ ಅವರು ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT