ಭಾನುವಾರ, ಮೇ 29, 2022
30 °C

ಸಿ.ಟಿ ರವಿಗೆ ಪಿತೃವಿಯೋಗ: ಡಿ.ಕೆ. ಶಿವಕುಮಾರ್‌ ಸಾಂತ್ವನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ಪಿತೃ ವಿಯೋಗಕ್ಕೆ ಒಳಗಾಗಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ಸಂಜೆ ಸಾಂತ್ವನ ಹೇಳಿದರು.

ಡಿ.ಕೆ. ಶಿವಕುಮಾರ್ ಅವರು ಗೋವಾದಲ್ಲಿ ಚುನಾವಣೆ ಪ್ರಚಾರ ಮುಗಿಸಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ ಸಿ.ಟಿ. ರವಿ ಅವರು ಎದುರಾದರು. 

ಶಾಸಕ ಸಿ.ಟಿ.ರವಿ ಅವರ ತಂದೆ ಸಿ.ಇ.ತಿಮ್ಮೇಗೌಡ (92) ಬೆಂಗಳೂರಿನಲ್ಲಿ ಶನಿವಾರ ನಿಧನರಾದರು. ತಿಮ್ಮೇಗೌಡ ಅವರು ಚಿಕ್ಕಮಾಗರವಳ್ಳಿಯವರು. ಅವರು ಕೃಷಿಕರು.

ಆಲ್ದೂರು ಸಮೀಪದ ತೋಟದಲ್ಲಿ ಭಾನುವಾರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು