ಜ್ವರದ ಲಕ್ಷಣಗಳು ಕಾಣಿಸಿಕೊಂಡ ಕಾರಣ ಅವರು ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದರು. ಸೋಂಕಿತರಾಗಿರುವುದು ಸೆ.2ಕ್ಕೆ ದೃಢಪಟ್ಟಿತ್ತು. ಜಯನಗರದ ಅಪೋಲೊ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆದುಕೊಂಡಿದ್ದರು. ಈಗ ಅವರು ಪೂರ್ಣ ಪ್ರಮಾಣದಲ್ಲಿ ಚೇತರಿಸಿಕೊಂಡಿದ್ದಾರೆ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಗೋವಿಂದಯ್ಯ ಯತೀಶ್ ತಿಳಿಸಿದ್ದಾರೆ.