‘ಪ್ರೇಮಿಗಳ ದಿನ’ ಹಸೆಮಣೆ ಏರಿದ ಐಶ್ವರ್ಯಾ–ಅಮರ್ತ್ಯ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ ಮತ್ತು ಕೆಫೆ ಕಾಫಿಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ ಪುತ್ರ, ಎಸ್.ಎಂ. ಕೃಷ್ಣ ಮೊಮ್ಮಗ ಅಮರ್ತ್ಯ ಹೆಗ್ಡೆ ‘ಪ್ರೇಮಿಗಳ ದಿನ’ವಾದ ಭಾನುವಾರ (ಫೆ. 14) ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ವೈಟ್ಫೀಲ್ಡ್ನಲ್ಲಿರುವ ಶೆರಟಾನ್ ಗ್ರ್ಯಾಂಡ್ ಹೋಟೆಲ್ನಲ್ಲಿ ಒಕ್ಕಲಿಗ ಸಂಪ್ರದಾಯದ ಪ್ರಕಾರ ಶಾಸ್ತ್ರೋಕ್ತವಾಗಿ ವಿವಾಹ ಕಾರ್ಯಕ್ರಮ ಜರುಗಿತು. ಮಗಳನ್ನು ಧಾರೆ ಎರೆದುಕೊಡುವ ಕ್ಷಣ ಡಿ.ಕೆ.ಶಿವಕುಮಾರ್ ಭಾವುಕರಾದರು. ವಿವಿಧ ಮಠಗಳ ಸ್ವಾಮೀಜಿಗಳು, ಗಣ್ಯರು, ಕುಟುಂಬಸ್ಥರು ನವಜೋಡಿಗೆ ಶುಭ ಹಾರೈಸಿದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ, ಕಾಂಗ್ರೆಸ್ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ದಿಗ್ವಿಜಯ ಸಿಂಗ್, ಜಿ. ಪರಮೇಶ್ವರ ಸೇರಿದಂತೆ ಹಲವು ಗಣ್ಯರು ಸಂಭ್ರಮದಲ್ಲಿ ಭಾಗಿಯಾದರು.
ಇದನ್ನೂ ಓದಿ– ಮಗಳ ಮದುವೆ: ಕ್ಷೇತ್ರದ ಜನರಿಗೆ ಸೀರೆ, ಬಟ್ಟೆ ಉಡುಗೊರೆ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.