ಮಂಗಳವಾರ, ಸೆಪ್ಟೆಂಬರ್ 29, 2020
22 °C

ಪರಿಹಾರ ಹಣ ತಲುಪಿಲ್ಲ: ಡಿಕೆಶಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಡಿ.ಕೆ.ಶಿವಕುಮಾರ್‌

ಮೈಸೂರು: ‘ನೆರೆ ಪರಿಹಾರ ಕಾರ್ಯಗಳಿಗೆ ಅನುದಾನ ಬಿಡುಗಡೆ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಹೇಳಿದ್ದರೂ, ಆ ಹಣ ನೆರೆಪೀಡಿತ ಜಿಲ್ಲೆಗಳಿಗೆ ತಲುಪಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದರು.

ಹುಣಸೂರಿನ ನೆರೆಪೀಡಿತ ಪ್ರದೇಶಗಳಿಗೆ ಶನಿವಾರ ಭೇಟಿ ನೀಡಿ ಮಾತನಾಡಿ, ‘ನೆರೆ ಪೀಡಿತ ಪ್ರದೇಶಗಳಲ್ಲಿನ ವಸ್ತುಸ್ಥಿತಿ ಅಧ್ಯಯನಕ್ಕೆ ಪಕ್ಷವು ಐದು ತಂಡಗಳನ್ನು ರಚಿಸಿದ್ದು, ರಾಜ್ಯ ಪ್ರವಾಸ ನಡೆಸಲಿದೆ. ಅಧ್ಯಯನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ ವೈಜ್ಞಾನಿಕ ರೀತಿಯಲ್ಲಿ ಪರಿಹಾರ ಬಿಡುಗಡೆ ಮಾಡುವಂತೆ ಒತ್ತಾಯಿಸಲಾಗುವುದು’ ಎಂದರು.

ಕಳೆದ ವರ್ಷ ನೆರೆ ಪರಿಹಾರದ ರೂಪದಲ್ಲಿ ಕೇಂದ್ರ ಸರ್ಕಾರ ನೀಡಿದ್ದ ಅನುದಾನವನ್ನು ‘ಪ್ರಸಾದ’ ಎಂದು ಸ್ವೀಕರಿಸಿದ್ದ ಮುಖ್ಯಮಂತ್ರಿ ಹೆಚ್ಚಿನ ಪರಿಹಾರಕ್ಕೆ ಒತ್ತಾಯಿಸಿರಲಿಲ್ಲ ಎಂದು ದೂರಿದರು.

ಭಿನ್ನಾಭಿಪ್ರಾಯವಿಲ್ಲ: ‘ಸಿದ್ದರಾಮಯ್ಯ ಮತ್ತು ನಾನು ಒಟ್ಟಿಗೆ ಪಕ್ಷ ಸಂಘಟನೆ ಮಾಡುತ್ತೇವೆ. ನಮ್ಮಲ್ಲಿ ಯಾವುದೇ ಭಿನ್ನಮತವಿಲ್ಲ. ಕಂದಾಯ ಸಚಿವ ಆರ್.ಅಶೋಕ ಏನೇನೋ ಹೇಳಲಿ ಬಿಡಿ ಪಾಪ. ಅವರಿಗೆ ನಮ್ಮ ಬಗ್ಗೆ ಬಹಳ ಕಾಳಜಿ ಇದೆ’ ಎಂದು ತಿರುಗೇಟು ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು