ಭಾನುವಾರ, ಮೇ 9, 2021
25 °C

ಕೊರೊನಾ ಸೋಂಕು ತಗುಲಿಲ್ಲ, ನಾನು ಆರೋಗ್ಯವಾಗಿದ್ದೇನೆ: ಡಿ.ಕೆ.ಶಿವಕುಮಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಾನು ಆರೋಗ್ಯವಾಗಿದ್ದು, ಕೊರೊನಾ ವೈರಸ್‌ ಸೋಂಕು ತಗುಲಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಫೇಸ್‌ಬುಕ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ‘ನನಗೆ ಕೊರೊನಾ ಸೋಂಕು ತಗುಲಿದೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರವಾಗುತ್ತಿರುವ ಸುದ್ದಿ ಸತ್ಯಕ್ಕೆ ಸಂಪೂರ್ಣ ದೂರವಾಗಿದೆ’ ಎಂದು ಹೇಳಿದ್ದಾರೆ.

‘ಕೊರೊನಾ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸುತ್ತಿದ್ದು, ನನಗೆ ಯಾವುದೇ ರೀತಿಯ ಸೋಂಕು ತಗುಲಿಲ್ಲ. ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿರುವ ಸುಳ್ಳು ಸುದ್ದಿಗೆ ಯಾರೂ ಕಿವಿಗೊಡಬಾರದು’‌ ಎಂದು ವಿನಂತಿಸುತ್ತೇನೆ ಎಂದಿದ್ದಾರೆ.

ಹಾಗೆಯೇ, ರಾಜ್ಯದಲ್ಲಿ ಕೊರೊನಾ ಉಲ್ಬಣವಾಗಿದ್ದು, ಸಾರ್ವಜನಿಕರು ಜಾಗೃತಿ ವಹಿಸುವಂತೆ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಇವನ್ನೂ ಓದಿ...

ಕೋವಿಡ್‌: ಎಚ್‌.ಡಿ.ಕುಮಾರಸ್ವಾಮಿಗೆ ಸಿಗದ ಹಾಸಿಗೆ

ಕಠಿಣ ಕೋವಿಡ್ ರೂಲ್ಸ್: ಮದುವೆಗೆ ಪಾಸ್ ಕಡ್ಡಾಯ, ಜಾತ್ರೆಗೆ ನಿರ್ಬಂಧ ಜಾರಿ

ನನಗೆ ಕೊರೋನಾ ಸೋಂಕು ತಗುಲಿದೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರವಾಗುತ್ತಿರುವ ಸುದ್ದಿ ಸತ್ಯಕ್ಕೆ ಸಂಪೂರ್ಣ...

Posted by DK Shivakumar on Saturday, April 17, 2021

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು