ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಕ್ಕೆ ಕಣ್ಣಿಲ್ಲದಿರುವುದು ಮತ್ತೆ ಸಾಬೀತು: ಡಿಕೆಶಿ

Last Updated 21 ಆಗಸ್ಟ್ 2021, 19:31 IST
ಅಕ್ಷರ ಗಾತ್ರ

ಬೆಂಗಳೂರು: ‘ಬದುಕಿರುವ ಯೋಧನ ಮನೆಗೆ ಹೋಗಿ ಕೇಂದ್ರ ಸಚಿವರು ಸಾಂತ್ವನ ಹೇಳಿರುವುದು ಬಿಜೆಪಿ ಸರ್ಕಾರಕ್ಕೆ ಕಣ್ಣು, ಕಿವಿ, ಹೃದಯ ಇಲ್ಲ ಎಂಬುದಕ್ಕೆ ಮತ್ತೊಂದು ಸಾಕ್ಷಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಟೀಕಿಸಿದರು.

ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, ‘ಕೇಂದ್ರ ಸಚಿವರು ರಾಜ್ಯಕ್ಕೆ ಭೇಟಿ ನೀಡಿದರೆ ಅವರು ಅತಿಥಿ ಇದ್ದಂತೆ. ಅವರು ಎಲ್ಲೇ ಹೋದರೂ, ಅವರ ಜತೆ ಪೊಲೀಸರು, ಅಧಿಕಾರಿಗಳು ಇರುತ್ತಾರೆ. ಆದರೂ ಈ ರೀತಿ ಯಡವಟ್ಟು ಆಗಿರುವುದು ಈ ಸರ್ಕಾರಕ್ಕೆ ಕಣ್ಣು, ಕಿವಿ, ಹೃದಯ ಇಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದೆ’ ಎಂದರು.

ಕೇಂದ್ರದ ಜವಾಬ್ದಾರಿ: ‘ಅಫ್ಗಾನಿಸ್ತಾನದಲ್ಲಿ ಸಿಲುಕಿರುವ ಕನ್ನಡಿಗರನ್ನು ವಾಪಸು ಕರೆತರುವುದು ಕೇಂದ್ರ ಸರ್ಕಾರದ ಜವಾಬ್ದಾರಿ’ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT