ಶನಿವಾರ, ಆಗಸ್ಟ್ 13, 2022
27 °C

ಬಿಎಸ್‌ವೈ–ಸಿ​ದ್ದರಾಮಯ್ಯ ಮಧ್ಯರಾತ್ರಿ ಭೇಟಿ ಬಗ್ಗೆ ಡಿಕೆಶಿಗೆ ಗೊತ್ತು: ಈಶ್ವರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನಡುರಾತ್ರಿ ಭೇಟಿ ಆಗುವ ಬಗ್ಗೆ ಡಿ.ಕೆ. ಶಿವಕುಮಾರ್ ಅವರಿಗೆ ಗೊತ್ತು. ನನಗೆ ಗೊತ್ತಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ಕುಮಾರಸ್ವಾಮಿ ಹೇಳಿಕೆಗೆ ಅವರು ದಾವಣಗೆರೆಯಲ್ಲಿ ಪ್ರತಿಕ್ರಿಯಿಸಿದ ಈಶ್ವರಪ್ಪ, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ. ಬರುವ ದಿನಗಳಲ್ಲಿ ಬಿಜೆಪಿ ತನ್ನ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುತ್ತದೆ. ಹೀಗಾಗಿ ಜೆಡಿಎಸ್ ಸಹಕಾರದ ಪ್ರಶ್ನೆಯೇ ಬರಲ್ಲ ಎಂದರು.

ನಾಯಕತ್ವ ಬದಲಾವಣೆ ಆಗಲ್ಲ. ಇದು ಸುಳ್ಳು ಸುದ್ದಿ
ಉಪಚುನಾವಣೆ ಬಳಿಕ ಸಿಎಂ ಬದಲಾಗುತ್ತಾರೆ. ನನಗೆ ದೆಹಲಿ ಮಾಹಿತಿ ಇದೆ ಎಂದು ಸಿದ್ದರಾಮಯ್ಯ ಹೇಳಿದ್ದು ಎನಾಯಿತು. ಸಿದ್ದರಾಮಯ್ಯ ಅಂದ್ರೆ ಸುಳ್ಳಿಗೆ ಇನ್ನೊಂದು ಹೆಸರು ಎಂದು ಟೀಕಿಸಿದರು.

ಮುಂದುವರಿದು, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ಸಿಎಂ ಆಗಬೇಕು ಎಂದು ಹಗಲುಗನಸು ಕಾಣುತ್ತಿದ್ದಾರೆ. ಮುಂದೆ ಬಿಜೆಪಿಯೇ ಅಧಿಕಾರಿಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಾರಿಗೆ ನೌಕರರ ಪ್ರತಿಭಟನೆ ಸರಿಯಲ್ಲ
ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಸಾರಿಗೆ ನೌಕರರು ಪ್ರತಿಭಟನೆ ನಡೆಸುವುದು ಸೂಕ್ತವಲ್ಲ ಎಂದು ಹೇಳಿದರು.

ರಾಜ್ಯದ ಬಜೆಟ್‌ನಲ್ಲಿ ಶೇಖಡಾ 56 ರಷ್ಟು ಸಿಬ್ಬಂದಿಯ ವೇತನಕ್ಕೇ ಹೋಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಸಾರಿಗೆ ನೌಕರರನ್ನ ಸರ್ಕಾರಿ ನೌಕರರೆಂದು ಪರಿಗಣಿಸುವುದು ತುಂಬಾ ಕಷ್ಟ. ಈಗ ಕೊರೊನಾ ಸಂಕಷ್ಟದ ಕಾಲ. ಇಂತಹ ಪರಿಸ್ಥಿತಿಯಲ್ಲಿ  ಹೋರಾಟ ಮಾಡುವುದು ಸರಿಯಲ್ಲ. ಸಾರಿಗೆ ನೌಕರರು ಇದನ್ನು ಅರ್ಥ ಮಾಡಿಕೊಳ್ಳಬೇಕು. ಈ ವಿಚಾರದಲ್ಲಿ ಅವರಿಗೆ ಕೈಮುಗಿದು ಬೇಡಿಕೊಳ್ಳುವೆ ಎಂದು ವಿನಂತಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು