ಮಂಗಳವಾರ, ಜನವರಿ 18, 2022
27 °C

ಮೇಕೆದಾಟು ಪಾದಯಾತ್ರೆಗೆ ಎಲ್ಲ ರೆಡಿ, ಮಾಸ್ಕ್‌ ಹೀರೋಗಳ ಪಡೆ ಕೂಡ: ಡಿಕೆಶಿ ಪೋಸ್ಟ್‌

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ನನ್ನ ಪ್ರಾಣ ಹೋದರೂ ಸರಿ, ಮೇಕೆದಾಟು ನಡಿಗೆ ಮಾಡಿಯೇ ತೀರುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸ್ಪಷ್ಟಪಡಿಸಿದ್ದಾರೆ.

ಇತ್ತ ಕೋವಿಡ್‌ ನಿಯಮಗಳಿಗೆ ಅನುಗುಣವಾಗಿ ಪಾದಯಾತ್ರೆ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸರ್ಕಾರವೂ ಘೋಷಿಸಿದೆ.

ಈ ಮಧ್ಯೆ ಮೇಕೆದಾಟು ಪಾದಯಾತ್ರೆ ಆರಂಭವಾಗುವ ರಾಮನಗರ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹೆಚ್ಚಾಗಿ ಹರಡುವುದನ್ನು ನಿಯಂತ್ರಿಸುವ ಸಲುವಾಗಿ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೆ. ರಾಕೇಶ್‌ಕುಮಾರ್ ಅವರು ಈಗಾಗಲೇ ಆದೇಶಿಸಿದ್ದಾರೆ.

ಈ ಅವಧಿಯಲ್ಲಿ ಸಾರ್ವಜನಿಕರ ಅನಗತ್ಯ ಓಡಾಟಕ್ಕೆ ನಿರ್ಬಂಧ ಹೇರಲಾಗಿದೆ. ಸಾರ್ವಜನಿಕ ಉದ್ಯಾನಗಳು ತೆರೆಯುವಂತಿಲ್ಲ. ಪ್ರವಾಸಿ ತಾಣಗಳೂ ಬಂದ್ ಆಗಲಿವೆ. ವ್ಯಾಪಾರ–ವಹಿವಾಟಿಗೂ ಒಂದಿಷ್ಟು ನಿರ್ಬಂಧ ಇರಲಿದೆ.

ಆದರೆ, ಇದ್ಯಾವುದನ್ನೂ ಲೆಕ್ಕಿಸದ ಕಾಂಗ್ರೆಸ್ ಪಾದಯಾತ್ರೆಗೆ ಸಕಲ ಸಿದ್ಧತೆಗಳನ್ನೂ ಮಾಡಿಕೊಂಡಿರುವುದು ಡಿ.ಕೆ ಶಿವಕುಮಾರ್‌ ಅವರ ಸಾಮಾಜಿಕ ಮಾಧ್ಯಮದ ಪೋಸ್ಟ್‌ನಿಂದ ಗೊತ್ತಾಗುತ್ತಿದೆ.

‘ಮೇಕೆದಾಟು ಪಾದಯಾತ್ರೆಗೆ ಎಲ್ಲವೂ ರೆಡಿ. ʼಮಾಸ್ಕ್‌ ಹೀರೋಗಳʼ ಪಡೆ ಕೂಡ’ ಎಂದು ಅವರು ಸೋಷಿಯಲ್‌ ಮೀಡಿಯಾಗಳಲ್ಲಿ ಬರೆದುಕೊಂಡಿದ್ದಾರೆ.ಜೊತೆಗೆ ‘ನಮ್ಮ ನೀರು ನಮ್ಮ ಹಕ್ಕು’ ಎಂಬ ಘೋಷಣೆಯುಳ್ಳ ಮಾಸ್ಕ್‌ಗಳನ್ನು ಅವರು ಪ್ರದರ್ಶಿಸಿದ್ದಾರೆ.

ಕೋವಿಡ್‌ ನಿಯಮಗಳನ್ನು ಪಾಲಿಸಿಯೇ ಪಾದಯಾತ್ರೆ ನಡೆಸುವುದಾಗಿ ಕಾಂಗ್ರೆಸ್‌ ಹಲವು ಬಾರಿ ಹೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು