ಶನಿವಾರ, ಜುಲೈ 2, 2022
25 °C

ಡಿ.ಕೆ.ಶಿವಕುಮಾರ್ ಆಪ್ತರ ರಿಟ್ ಅರ್ಜಿ: ಆದಾಯ ತೆರಿಗೆ ಇಲಾಖೆ ಆಕ್ಷೇಪಣೆಗೆ ಅವಕಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಆದಾಯ ತೆರಿಗೆ ಇಲಾಖೆಯ ನಾಲ್ಕು ವರ್ಷಗಳ ಆದಾಯ‌ ತೆರಿಗೆ ಮೌಲ್ಯಮಾಪನ ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ಅವರ ಇಬ್ಬರು ಆಪ್ತರು ಸಲ್ಲಿಸಿರುವ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್ ಆದೇಶಿಸಿದೆ.

ಈ ಕುರಿತಂತೆ ಡಿ.ಕೆ.ಶಿವಕುಮಾರ್ ಆಪ್ತರಾದ ಸುನಿಲ್ ಕುಮಾರ್ ಶರ್ಮ‌ ಮತ್ತು ಕಂದಸ್ವಾಮಿ ರಾಜೇಂದ್ರನ್ ಸಲ್ಲಿಸಿರುವ ರಿಟ್ ಅರ್ಜಿಗಳನ್ನು ನ್ಯಾ. ಇ.ಎಸ್. ಇಂದಿರೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಕೇಂದ್ರದ ಪರ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಂ.ಬಿ.ನರಗುಂದ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು 2 ವಾರಗಳ ಸಮಯ ನೀಡುವಂತೆ ಮನವಿ ಮಾಡಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಕಾಲಾವಕಾಶ ನೀಡಿ ವಿಚಾರಣೆ ಮುಂದೂಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು