ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನನ್ನ ಕೈಗೆ ಪೆನ್ನು, ಪೇಪರ್ ಕೊಡಿ: ಒಕ್ಕಲಿಗ ಸಮುದಾಯಕ್ಕೆ ಡಿಕೆಶಿ ಮನವಿ

Last Updated 27 ನವೆಂಬರ್ 2022, 20:33 IST
ಅಕ್ಷರ ಗಾತ್ರ

ಬೆಂಗಳೂರು:‘ಎಸ್.ಎಂ. ಕೃಷ್ಣ ಅವರ ನಂತರ ನನ್ನನ್ನು ಕಾಂಗ್ರೆಸ್ ಪಕ್ಷ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಕೂರಿಸಿದೆ. ನನ್ನ ಸಂಘಟನೆಯ ಇತಿಹಾಸ ಒಂದು ಕಡೆಯಾದರೆ, ನಾನು ಒಕ್ಕಲಿಗ ಎಂಬ ಕಾರಣಕ್ಕೆ ಆಯ್ಕೆ ಮಾಡಿರುವುದೂ ಮತ್ತೊಂದು ಸತ್ಯ. ಆರ್. ಅಶೋಕ ಸೇರಿದಂತೆ ಇಲ್ಲಿರುವ ಸಚಿವರು ಒಕ್ಕಲಿಗ ಸಮಾಜದ ಪ್ರತಿನಿಧಿ ಆಗಿರುವುದಕ್ಕೆ ಈ ಸ್ಥಾನಕ್ಕೆ ಬಂದಿದ್ದಾರೆ. ಇದನ್ನು ನಾವೆಲ್ಲ ಗಮನದಲ್ಲಿಟ್ಟುಕೊಳ್ಳಬೇಕು. ನಾವು ಬೇರೆಯವರ ಹಕ್ಕನ್ನು ಕೇಳುತ್ತಿಲ್ಲ. ಈ ಸಮಾಜದ ಜನಸಂಖ್ಯೆ ಎಷ್ಟಿದೆಯೋ ಅದರ ಆಧಾರದಲ್ಲಿ ಮೀಸಲಾತಿ ನೀಡಿ ಎಂದು ಕೇಳುತ್ತಿದ್ದೇವೆ’ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಒಕ್ಕಲಿಗರ ಸಂಘದ ಆವರಣ ದಲ್ಲಿರುವ ಕುವೆಂಪು ಕಲಾಕ್ಷೇತ್ರದಲ್ಲಿ ಆದಿಚುಂಚನಗಿರಿ ಸಂಸ್ಥಾನದ ನಿರ್ಮಲಾನಂದನಾಥ ಸ್ವಾಮೀಜಿ, ಪಟ್ಟನಾಯಕನಹಳ್ಳಿ ಮಠದ ನಂಜಾವಧೂತ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಉಪಸ್ಥಿತಿಯಲ್ಲಿ ಭಾನುವಾರ ನಡೆದ ಮೀಸಲಾತಿಸಭೆಯಲ್ಲಿ ಡಿಕೆಶಿ ಮಾತನಾಡಿದರು.

‘ನಿಮ್ಮ ಕೈಯಲ್ಲಿ ಅಧಿಕಾರ ಇಲ್ಲ ದಿದ್ದರೆ ನಿಮ್ಮಿಂದ ಏನನ್ನೂ ಮಾಡಲು ಸಾಧ್ಯವಿಲ್ಲ. ಅಧಿಕಾರವನ್ನು ಕೊಡುವುದು, ಬಿಡುವುದು ಈ ಜನಾಂಗದ ಕೈಯಲ್ಲಿ ಮಾತ್ರ ಇದೆ. ನನ್ನ ಕೈಗೆ ಪೆನ್ನು, ಪೇಪರ್ ಕೊಡಿ. ಯಾವ ರೀತಿ ಅನುಕೂಲ ಮಾಡಿಕೊಡಬೇಕು ಎಂದು ನನಗೆ ಗೊತ್ತಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT