ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಕಾದಾಟದ ಹೋರಿಗಳು: ಶ್ರೀರಾಮುಲು

Last Updated 7 ಮಾರ್ಚ್ 2021, 8:34 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಅಧಿಕಾರ ಇಲ್ಲದಿದ್ದರೂ ಮುಖ್ಯಮಂತ್ರಿ ಖುರ್ಚಿಗೆ ಜಿದ್ದಿಗೆ ಬಿದ್ದಿರುವ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಜೋಡೆತ್ತುಗಳು ಅಲ್ಲ; ಅಧಿಕಾರಕ್ಕೆ ಬಡಿದಾಡುತ್ತಿರುವ ಹೋರಿಗಳು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಟೀಕಿಸಿದರು.

ಅಂಬೇಡ್ಕರ್ ಭವನ ಉದ್ಘಾಟನಾ ಸಮಾರಂಭಕ್ಕೂ ಮೊದಲು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಸಿಡಿ ಪ್ರಕರಣದಲ್ಲಿ ಹಲವರ ಕೈವಾಡ ಇದೆ. ಕಾಂಗ್ರೆಸ್ ನಾಯಕರು ಹಾಗೂ ಕೆಲ ಸಂಘ ಸಂಸ್ಥೆಗಳ ಹೆಸರು ಕೇಳಿ ಬರುತ್ತಿವೆ. ಈ ಪಿತೂರಿಯಲ್ಲಿ ಯಾರೆಲ್ಲ ಇದ್ದಾರೆ ಎಂದು ತನಿಖೆಯಿಂದ ಹೊರಬರಬೇಕಾಗಿದೆ ಎಂದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಪಕ್ಷ ತೊರೆದು ಬಂದ ನಾಯಕರ ತೇಜೋವಧೆ ಯತ್ನ ನಡೆಯುತ್ತಿದೆ. ಹೀಗಾಗಿ 6 ಸಚಿವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಸಿಡಿ ಅಂದ ಕೂಡಲೇ ರಾಸಲೀಲೆ, ಹನಿಟ್ರ್ಯಾಪ್ ಅಲ್ಲ. ಪೋನ್ ಸಂಭಾಷಣೆ, ದಾಖಲಾತಿ ವಿಚಾರ ಸಹ ಸಿಡಿಯಲ್ಲಿ ಇರಬಹುದು ಎಂದರು.

ವಿನಾಕಾರಣ ತೇಜೋವಧೆ ಆದ ನಂತರ ನಾಯಕರ ಗೌರವ ಕಡಿಮೆ ಆಗುತ್ತೆ. ಹೀಗಾಗಿ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಬಿಜೆಪಿ ಸರ್ಕಾರ ಹಾಗೂ ಸಚಿವರ ಹೆಸರು ಕೆಡಿಸುವ ಪ್ರಯತ್ನ ನಡೆಯುತ್ತಿದೆ ಎಂದರು.

ಶ್ರೀರಾಮುಲು ಶಕ್ತಿ ಕುಂದಿಲ್ಲ,ನಾನು ರಾಜ್ಯ ಪ್ರವಾಸ ಮಾಡುತ್ತಾ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದೇನೆ. ಸ್ಥಾನಮಾನ ನೀಡುವ ಬಗ್ಗೆ ನಾನು ಎನೂ ಕೇಳಲ್ಲ, ಬೇಸರವೂ ಸಹ ಇಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT