ಸೋಮವಾರ, ಜನವರಿ 30, 2023
25 °C

ಕುತೂಹಲ ಮೂಡಿಸಿದ ಡಿ.ಕೆ ಸುರೇಶ್‌ – ಯೋಗೇಶ್ವರ್‌ ಆಪ್ತ ಮಾತು!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ:  ಹೆದ್ದಾರಿಯಲ್ಲಿ ಕೇಂದ್ರ ಸಚಿವರನ್ನು ಬರಮಾಡಿಕೊಳ್ಳಲು ಬಂದಿದ್ದ ಸಂಸದ ಡಿ.ಕೆ. ಸುರೇಶ್‌ ಹಾಗೂ ವಿಧಾನ ಪರಿಷತ್‌ ಸದಸ್ಯ ಸಿ.ಪಿ. ಯೋಗೇಶ್ವರ್‌ ನಡುವಿನ ಆಪ್ತ ಮಾತುಕತೆ ಕುತೂಹಲ ಮೂಡಿಸಿತ್ತು.

ಇಬ್ಬರೂ ಪಕ್ಕದಲ್ಲೇ ನಿಂತು ನಗುತ್ತಲೇ ಹರಟೆ ಹೊಡೆದರು. ‘ಕಳೆದ ಬಾರಿ ಬ್ರದರ್‌– ಸಿಸ್ಟರ್ ಎಂದು ಹೋಗಿದ್ದೀರಿ? ಏನಾಯಿತು ದೋಸ್ತಿ?’ ಎಂದು ಸಿಪಿವೈ ನಗುತ್ತಲೇ ಕಾಲೆಳೆದರು. ಈ ಸಂದರ್ಭ ಮಾತನಾಡಿದ ಇಬ್ಬರೂ ‘ ನಾವಿಬ್ಬರೂ ಮೂವತ್ತು ವರ್ಷದ ಸ್ನೇಹಿತರು. ರಾಜಕಾರಣ ಬೇರೆ. ಇಂದಿನದ್ದು ಬರೀ ವಿಶ್ವಾಸದ ಮಾತುಕತೆ ಅಷ್ಟೇ’ ಎಂದು ಸಮಜಾಯಿಷಿಯನ್ನೂ ನೀಡಿದರು.

ಚನ್ನಪಟ್ಟಣದಲ್ಲಿ ಈ ಬಾರಿ ಬಿಜೆಪಿಯಿಂದ ಯೋಗೇಶ್ವರ್‌ ಹಾಗೂ ಜೆಡಿಎಸ್‌ನಿಂದ ಎಚ್‌.ಡಿ. ಕುಮಾರಸ್ವಾಮಿ ಸ್ಪರ್ಧೆ ಖಚಿತವಾಗಿದೆ. ಕಾಂಗ್ರೆಸ್‌ ಮಾತ್ರ ಇನ್ನೂ ಅಭ್ಯರ್ಥಿ ಹಾಕಿಲ್ಲ. ಈ ನಡುವೆಯೇ ಈ ಇಬ್ಬರ ಸಾಮೀಪ್ಯ ಹಲವು ಕುತೂಹಲಗಳಿಗೆ ಕಾರಣವಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು