ಭಾನುವಾರ, ಸೆಪ್ಟೆಂಬರ್ 25, 2022
22 °C

ಸರ್ಕಾರ ಮತ್ತು ಪಕ್ಷಕ್ಕೆ ಮುಜುಗರ ಆಗುವಂತ ಹೇಳಿಕೆ ನೀಡಬೇಡಿ: ನಳಿನ್‌ ಕುಮಾರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸರ್ಕಾರ ಮತ್ತು ಪಕ್ಷಕ್ಕೆ ಮುಜುಗರ ಆಗುವಂತ ಹೇಳಿಕೆಗಳನ್ನು ನೀಡಬಾರದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರು ಸಚಿವರು ಮತ್ತು ಶಾಸಕರಿಗೆ ಸೂಚನೆ ನೀಡಿದ್ದಾರೆ.

ಈ ಸಂಬಂಧ ಸಚಿವರಾದ ಜೆ.ಸಿ.ಮಾಧುಸ್ವಾಮಿ, ಬಿ.ಶ್ರೀರಾಮುಲು ಮತ್ತು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ಜತೆ ನಳಿನ್‌ ಕುಮಾರ್‌ ಬುಧವಾರ ಮಾತುಕತೆ ನಡೆಸಿದರು.

ಸರ್ಕಾರದ ಕಾರ್ಯವೈಖರಿ ಅಥವಾ ಪಕ್ಷದ ಸಂಘಟನೆಗೆ ಸಂಬಂಧಿಸಿದ ಯಾವುದಾದರು ಸಲಹೆ –ಸೂಚನೆಗಳು ಇದ್ದರೆ ಅದನ್ನು ಪಕ್ಷದ ವೇದಿಕೆಯಲ್ಲಿ ಅಥವಾ ಸಚಿವ ಸಂಪುಟ ಸಭೆಯಲ್ಲಿ ತಿಳಿಸಬೇಕು. ಬಹಿರಂಗವಾಗಿ ಹೇಳಿಕೆ ನೀಡಿ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸ ಬಾರದು ಎಂದು ಸೂಚಿಸಿದ್ದಾಗಿ ಮೂಲಗಳು ತಿಳಿಸಿವೆ.

‘ಇತ್ತೀಚೆಗೆ ಮಾಧುಸ್ವಾಮಿ ಅವರು ಸರ್ಕಾರ ನಡೆಯುತ್ತಿಲ್ಲ, ಮ್ಯಾನೇಜ್ ಮಾಡುತ್ತಿದ್ದೇವೆ’ ಎಂದು ಹೇಳಿದ್ದು, ‘ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿ ಆಗಲಿ ಎಂದು ಬಯಸುತ್ತೇನೆ’ ಎಂದು ಶ್ರೀರಾಮುಲು ಹೇಳಿಕೆ ನೀಡಿರುವುದು ಪಕ್ಷವನ್ನು ಮುಜುಗರಕ್ಕೆ ಸಿಲುಕಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು