ಮಂಗಳವಾರ, ಸೆಪ್ಟೆಂಬರ್ 22, 2020
26 °C

ಜೆಇಇ ಅಭ್ಯರ್ಥಿಗಳ ದಾಖಲಾತಿ ಅಪ್‌ಲೋಡ್‌ ಪ್ರಕ್ರಿಯೆ ಮುಂದೂಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪ್ರಸ್ತುತ ನಡೆಯುತ್ತಿರುವ ಜೆಇಇ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳ ಮನವಿ ಪರಿಗಣಿಸಿ, ಸೆ. 2ರಿಂದ ಆರಂಭವಾಗಬೇಕಿದ್ದ ಮೂಲ ದಾಖಲೆಗಳ ಅಪ್‌ಲೋಡ್‌ ಪ್ರಕ್ರಿಯೆಯನ್ನು ಸೆ. 6ರವರೆಗೆ ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಯುಜಿಸಿಇಟಿ–2020ಕ್ಕೆ ದಾಖಲೆಗಳನ್ನು ಅಪ್‌ಲೋಡ್‌ ಮಾಡುವ ಪರಿಷ್ಕೃತ ವೇಳಾಪಟ್ಟಿಯನ್ನು ಸೆ. 5ರಂದು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು. ಪರಿಷ್ಕೃತ ವೇಳಾಪಟ್ಟಿಯಂತೆ ವಿದ್ಯಾರ್ಥಿಗಳು ದಾಖಲೆಗಳನ್ನು ಅಪ್‌ಲೋಡ್‌ ಮಾಡಬೇಕು. ದಾಖಲಾತಿಗಳ ಪರಿಶೀಲನೆಗೆ ಯಾವುದೇ ಸಹಾಯ ಕೇಂದ್ರಗಳು ಅಥವಾ ಬೆಂಗಳೂರಿನಲ್ಲಿರುವ ಕಚೇರಿಗೆ ಬರುವ ಅಗತ್ಯ ಇಲ್ಲ ಎಂದೂ ಪ್ರಾಧಿಕಾರ ಪ್ರಕಟಣೆ ತಿಳಿಸಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು