ಭಾನುವಾರ, ಸೆಪ್ಟೆಂಬರ್ 25, 2022
30 °C

ಸಿಇಟಿ: ಅರ್ಹ ಅಭ್ಯರ್ಥಿಗಳ ದಾಖಲೆ ತಿದ್ದುಪಡಿಗೆ ಅವಕಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಹರಾಗಿರುವ (ಸಿಇಟಿ) ಅಭ್ಯರ್ಥಿಗಳ ದಾಖಲೆಗಳಲ್ಲಿ ತಪ್ಪುಗಳಿದ್ದರೆ ತಿದ್ದುಪಡಿ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತೆ ಅವಕಾಶ ಕಲ್ಪಿಸಿದೆ.

ಶಾಲಾ ವಿವರಗಳು ಅಪೂರ್ಣವಾಗಿದ್ದರೆ ಸೆ.1ರಿಂದ 7ರವರೆಗೆ ಪ್ರತಿ ದಿನ ರಾತ್ರಿ 10ರಿಂದ ಮರುದಿನ ಬೆಳಿಗ್ಗೆ 8ರವರೆಗೆ ತಿದ್ದುಪಡಿ ಮಾಡಿಕೊಳ್ಳಬಹುದು. ಪೂರ್ಣ ಭರ್ತಿ ಮಾಡದೆ ಖಾಲಿ ಬಿಟ್ಟಿದ್ದಲ್ಲಿ ಸೆ.1ರಿಂದ 7ರವರೆಗೆ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಸರಿಪಡಿಸಿಕೊಳ್ಳಬಹುದು.

ಒಂದು ಅಥವಾ 2 ವರ್ಷ ವಿವರ ಸೇರಿಸಲು ಸೆ. 8ರ ನಂತರ ಅವಕಾಶ ನೀಡಲಾಗುವುದು. ಜಾತಿ, ಆದಾಯ ಪ್ರಮಾಣಪತ್ರಗಳ ಆರ್‌ಡಿ ಸಂಖ್ಯೆ ತಿದ್ದುಪಡಿಗೆ ಸೆ.4ರ ಬೆಳಿಗ್ಗೆ 8ರಿಂದ ಸೆ.5ರಂದು ಸಂಜೆ 5ರವರೆಗೆ ಅವಕಾಶ ನೀಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು