ಬೆಂಗಳೂರು: ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತಿ ದೊಡ್ಡರಂಗೇಗೌಡ ಅವರು ಆಯ್ಕೆಯಾಗಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಾರ್ಯಕಾರಿ ಸಮಿತಿಯು ಶುಕ್ರವಾರ ಈ ಆಯ್ಕೆ ಮಾಡಿದೆ.

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮನು ಬಳಿಗಾರ್, ‘ಸಮ್ಮೇಳನದ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಗೊ.ರು.ಚನ್ನಬಸಪ್ಪ, ವೀಣಾ ಶಾಂತೇಶ್ವರ, ಎಸ್.ಆರ್. ಗುಂಜಾಳ್, ಕೆ.ಎಸ್. ಭಗವಾನ್ ಸೇರಿದಂತೆ ವಿವಿಧ ಸಾಹಿತಿಗಳ ಹೆಸರು ಚರ್ಚೆಗೆ ಬಂದಿದ್ದವು. ಅಂತಿಮವಾಗಿ ದೊಡ್ಡರಂಗೇಗೌಡ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು’ ಎಂದು ತಿಳಿಸಿದರು.

‘ಪ್ರತಿಭೆ ಮತ್ತು ಅರ್ಹತೆ ಇದ್ದವರನ್ನು ಆಯ್ಕೆ ಮಾಡಲಾಗಿದೆ. ಸಮ್ಮೇಳನ ನಡೆಸಲು ಕೋವಿಡ್ ನಿರ್ಬಂಧಗಳನ್ನು ಸಡಿಲಿಸಿ, ಅವಕಾಶ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.