ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂದಿ ಹೇರಿಕೆ ಸಹಿಸುವುದಿಲ್ಲ: ಸಾಹಿತಿ ದೊಡ್ಡರಂಗೇಗೌಡ

Last Updated 27 ಜನವರಿ 2021, 5:34 IST
ಅಕ್ಷರ ಗಾತ್ರ

ಬೆಂಗಳೂರು: 'ಕನ್ನಡಿಗರ ಮೇಲೆ ಹಿಂದಿ ಹಾಗೂ ಇಂಗ್ಲಿಷ್ ಭಾಷೆ ಹೇರಿಕೆಯ ರೀತಿ ನೀತಿಗಳನ್ನು ಸಹಿಸುವುದಿಲ್ಲ. ನನ್ನ ಮಾತುಗಳು ಕನ್ನಡಿಗರ ಮನಸ್ಸನ್ನು ನೋಯಿಸಿದ್ದರೆ ಕ್ಷಮೆಯಾಚಿಸುತ್ತೇನೆ ' ಎಂದು 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷ ದೊಡ್ಡರಂಗೇಗೌಡ ತಿಳಿಸಿದ್ದಾರೆ.

ಹಿಂದಿ ಭಾಷೆಯ ಬಗೆಗಿನ ಅವರ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಈ ಬಗ್ಗೆ ರಾಜ್ಯದ ಜನತೆಯ ಕ್ಷಮೆ ಯಾಚಿಸಿರುವ ಅವರು, ' ನಾನೇನು ಯಾವುದೇ ಭಾಷೆಯನ್ನು ನನ್ನ ತಲೆಯ ಮೇಲೆ ಹೊತ್ತು ಮೆರೆಸುತ್ತಿಲ್ಲ. ನಾನು ಭಕ್ತಿ ಪೂರ್ವಕವಾಗಿ ನನ್ನ ಅಂತರಾಳದಿಂದ ಕನ್ನಡವನ್ನು ಆರಾಧಿಸುತ್ತೇನೆ. ಕನ್ನಡವನ್ನೇ ನನ್ನ ತಲೆಯ ಮೇಲೆ ಹೊತ್ತು ಮೆರೆಸುತ್ತೇನೆ ' ಎಂದು ಸ್ಪಷ್ಟನೆ ನೀಡಿದ್ದಾರೆ.

ಇದರೊಂದಿಗೆ ಹಿಂದಿ ಹೇರಿಕೆಯ ಕುರಿತು ಸಹಮತ ಹೊಂದಿದ್ದಾರೆ ಎನ್ನಲಾಗಿದ್ದ ದೊಡ್ಡರಂಗೇಗೌಡರ ವಿವಾದಕ್ಕೆ ತೆರೆ ಎಳೆಯಲು ಮುಂದಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT