ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಡಿಯೂರಪ್ಪ ನಾಮ್‌ಕೇವಾಸ್ತೇ ಮುಖ್ಯಮಂತ್ರಿ: ಸಿದ್ದರಾಮಯ್ಯ

ಬ್ಲ್ಯಾಕ್‌ಮೇಲ್ ಮಾಡಿದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಧೈರ್ಯ ಸಿಎಂಗಿದೆಯೇ?
Last Updated 14 ಜನವರಿ 2021, 11:08 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ, ಬ್ಲ್ಯಾಕ್‌ಮೇಲ್ ಮಾಡಿದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಧೈರ್ಯ ಮುಖ್ಯಮಂತ್ರಿಗಳಿಗಿದೆಯೇ ಎಂದು ಪ್ರಶ್ನೆ ಮಾಡಿದ್ದಾರೆ.

ಗುರುವಾರದಂದು ಟ್ವೀಟ್ ಮಾಡಿರುವ ಸಿದ್ಧರಾಮಯ್ಯ, ಸಿಎಂ ಯಡಿಯೂರಪ್ಪ ಅವರನ್ನು ಸಿ.ಡಿ ತೋರಿಸಿ ಬೆದರಿಸಿ ಕೆಲವರು ಮಂತ್ರಿ ಹುದ್ದೆ ಪಡೆದಿದ್ದಾರೆ ಎಂದು ಬಿಜೆಪಿ ಶಾಸಕರೇ ಆರೋಪಿಸುತ್ತಿದ್ದಾರೆ. ಬ್ಲ್ಯಾಕ್‌ಮೇಲ್ ಮಾಡಿದವರು ಯಾರೇ ಆಗಿರಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಧೈರ್ಯ ಮುಖ್ಯಮಂತ್ರಿಗಳಿದೆಯೇ ಎಂದು ವಾಗ್ದಾಳಿ ನಡೆಸಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕುಟುಂಬ ರಾಜಕಾರಣದ ಬಗ್ಗೆ ಬಿಜೆಪಿ ನಾಯಕರಿಗೆ ತಡವಾಗಿ ಜ್ಞಾನೋದಯವಾಗಿದೆ. ಯಡಿಯೂರಪ್ಪ ನಾಮ್‌ಕೇವಾಸ್ತೇ ಮುಖ್ಯಮಂತ್ರಿ, ನಿಜವಾದ ಅಧಿಕಾರ ಚಲಾಯಿಸುತ್ತಿರುವುದು ಅವರ ಮಗ ಎಂದು ನಾನು ಬಹಳ ಹಿಂದೆಯೇ ಹೇಳಿದ್ದೆ. ಕೆಲವರಿಗೆ ಈಗೀಗ ಸತ್ಯ ಗೊತ್ತಾಗ್ತಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು.

ಮುಖ್ಯಮಂತ್ರಿ ಅವರ ಕುರ್ಚಿ ಗಟ್ಟಿಯಾಗಿದ್ದರೆ ಸಂಪುಟ ವಿಸ್ತರಣೆಗಾಗಿ ಹೈಕಮಾಂಡ್ ಬಳಿ ಗೋಗರೆಯುವ, ಕೈಕಾಲು ಹಿಡಿಯುವ ಅಗತ್ಯವಿರುತ್ತಿರಲಿಲ್ಲ. ಕೆಲವರಿಗೆ ಸಚಿವ ಸ್ಥಾನ ಕೊಡಲು ಕಾನೂನಿನ ತೊಡಕಿದೆ ಅಂತ ಗೊತ್ತಿದ್ರೂ ಸುಳ್ಳು ವಾಗ್ದಾನ ನೀಡಿ ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ. ಹಾಗಾಗಿ ಬಿಜೆಪಿ ಸೇರಿದ ಕೆಲವರು ಬಾಯಿ ಬಡ್ಕೊತಿರೋದು ಎಂದು ಟೀಕೆ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT