ಸೋಮವಾರ, ಜನವರಿ 25, 2021
24 °C

ಕುರ್ಚಿ ಉಳಿಸಿಕೊಳ್ಳುವ ಕಸರತ್ತು ಸಿದ್ದರಾಮಯ್ಯ ಟೀಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಆರ್ಥಿಕ ಸಂಕಷ್ಟದ ನಡುವೆಯೂ ನಿಗಮ, ಮಂಡಳಿಗಳಿಗೆ ನೇಮಕ, ಕುರ್ಚಿ ಉಳಿಸಿಕೊಳ್ಳುವ ಕಸರತ್ತು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ನಿಗಮ ಮಂಡಳಿಗೆ ನೇಮಕಕ್ಕೆ ಪ್ರತಿಕ್ರಿಯಿಸಿರುವ ಅವರು, ‘ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಇಳಿಯುವುದು ಖಚಿತವಾಗಿರಬೇಕು. ಹೀಗಾಗಿ, ಅವರು ತರಾತುರಿಯಲ್ಲಿ ನಿಗಮ ಮಂಡಳಿಗಳಿಗೆ ನೇಮಕ ಮಾಡಿದ್ದಾರೆ’ ಎಂದಿದ್ದಾರೆ.

‘ರಾಜ್ಯ ಸರ್ಕಾರ ದಿವಾಳಿಯಾಗಿದೆ. ವೃದ್ಧಾಪ್ಯ ವೇತನ, ವಿಧವಾ ವೇತನ ನೀಡಲು ಸರ್ಕಾರದ ಬಳಿ ಹಣವಿಲ್ಲ. ಇಂಥ ಆರ್ಥಿಕ ಸಂಕಷ್ಟದ ನಡುವೆ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಿಸಿ ಸರ್ಕಾರ ಇನ್ನಷ್ಟು ದುಂದುವೆಚ್ಚಕ್ಕೆ ಎಡೆ ಮಾಡಿಕೊಟ್ಟಿದೆ. ಇದು ಅಧಿಕಾರ ಉಳಿಸಿಕೊಳ್ಳುವ ಸರ್ಕಸ್‌ ಅಲ್ಲದೆ ಬೇರೇನೂ ಅಲ್ಲ’ ಎಂದೂ ಹೇಳಿದ್ದಾರೆ.

‘ಖಾಸಗಿ ಶಿಕ್ಷಣ ಸಂಸ್ಥೆಗಳು ಶುಲ್ಕ ನೀಡದೇ ಹೋದಲ್ಲಿ ಆನ್‌ಲೈನ್‌ ತರಗತಿ ಸೌಲಭ್ಯ ನೀಡದಿರುವುದು ಸರಿಯಲ್ಲ. ಖಾಸಗಿ ಶಾಲೆಗಳ ಜೊತೆ ಸರ್ಕಾರ ಶಾಮೀಲಾಗಿದೆ. ಹೀಗಾಗಿ ವಿದ್ಯಾರ್ಥಿಗಳು ಮತ್ತು ಪೋಷಕರ ರಕ್ಷಣೆಗೆ ಏನೂ ಮಾಡುತ್ತಿಲ್ಲ. ಇದು ಬರೀ ಲೂಟಿ ಸರ್ಕಾರ’ ಎಂದಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು