ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೋಡಿ ಕೊಲೆ: ಬಾಲಕ ಸೇರಿ ಮೂವರ ಬಂಧನ

ಬಂಧಿತರು ಬೆಂಗಳೂರು ನಿವಾಸಿಗಳು* ಬಂಧಿತರ ಸಂಖ್ಯೆ 6ಕ್ಕೆ ಏರಿಕೆ
Last Updated 25 ಫೆಬ್ರವರಿ 2023, 22:30 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ದೊಡ್ಡಬೆಳವಂಗಲದಲ್ಲಿ ಕಳೆದ ವಾರ ಕ್ರಿಕೆಟ್‌ ಪಂದ್ಯಾವಳಿ ವೇಳೆ ನಡೆದ ಜೋಡಿ ಕೊಲೆಗೆ ಸಂಬಂಧಿಸಿದಂತೆ ಬಾಲಕ ಸೇರಿ ದಂತೆ ಮೂವರನ್ನು ಶನಿವಾರ ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಇದರೊಂದಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ.

ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದ ಆರೋಪದ ಮೇಲೆ ಬೆಂಗಳೂರಿನ ಹಂದರಹಳ್ಳಿ ನಿವಾಸಿಗಳಾದ ಸೋಮಶೇಖರ್‌ ಅಲಿಯಾಸ್‌ ಸೋಮು, ಮುನ್ನಾ ಜೊತೆ ಬಾಲಕನೊಬ್ಬನನ್ನು ಪೊಲೀಸರು ಬಂಧಿಸಿ, ದೊಡ್ಡಬಳ್ಳಾಪುರ ನ್ಯಾಯಾಯಕ್ಕೆ ಹಾಜರುಪಡಿಸಿದರು.

ಆ ಪೈಕಿ ಇಬ್ಬರು ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಮಾರ್ಚ್‌ 7ರವರೆಗೂ ಪೊಲೀಸ್‌ ವಶಕ್ಕೆ ಪಡೆಯಲಾಗಿದೆ. ಬಾಲಕನನ್ನು ಬಾಲಮಂದಿರಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸ್‌ ಇಲಾಖೆಯ ಮೂಲಗಳು ತಿಳಿಸಿವೆ.

ಎಫ್‌ಐಆರ್‌ನಲ್ಲಿ ಹೆಸರಿಲ್ಲ: ಜೋಡಿ ಕೊಲೆ ಪ್ರಕರಣದ ಎಫ್‌ಐಆರ್‌ ನಲ್ಲಿ ಈ ಮೂವರು ಆರೋಪಿಗಳ ಹೆಸರು ಇರಲಿಲ್ಲ. ಕೊಲೆ
ನಡೆದ ಸಂದರ್ಭದಲ್ಲಿ ಪ್ರಮುಖ ಆರೋಪಿ ವಿನಯ್‌ ಹಾಗೂ ಇತರರ ಜೊತೆಗಿದ್ದರು. ಇವರಷ್ಟೇ ಅಲ್ಲದೆ ಇನ್ನೂ ಮೂರ್ನಾಲ್ಕು ಜನರು ಭಾಗಿಯಾಗಿರುವ ಬಗ್ಗೆ ಖಚಿತ ಮಾಹಿತಿ ಇದೆ. ಸದ್ಯದಲ್ಲೇ ಅವರನ್ನೂ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ದೂರಿನಲ್ಲಿದ್ದ ಐವರು ಆರೋಪಿಗಳಲ್ಲಿ ಇಬ್ಬರು ಆರೋಪಿಗಳನ್ನು ಕಾಲಿಗೆ ಗುಂಡಿಟ್ಟು ಬಂಧಿಸಲಾಗಿದ್ದು, ಮತ್ತೊಬ್ಬ ಆರೋಪಿ ನ್ಯಾಯಾಲಯಕ್ಕೆ ಶರಣಾಗಿದ್ದಾನೆ. ಕೋರಿ, ದೀಪು ಎಂಬ ಆರೋಪಿಗಳು ಇನ್ನೂ ತಲೆಮರೆಸಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT