ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕಾನೂನು ಹೋರಾಟ ಬಳಿಕವೇ ಡಿಪಿಆರ್‌ಗೆ ಅನುಮತಿ’

Last Updated 31 ಜನವರಿ 2023, 19:51 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ರಚನೆಯಾದ ನ್ಯಾಯಾಧೀಕರಣದ ತೀರ್ಪಿನ ಮೇರೆಗೆ ಎಲ್ಲಾ ಆಯಾಮಗಳನ್ನು ಪರಿಶೀಲಿಸಿ ಕೇಂದ್ರ ಸರ್ಕಾರ ಮಹದಾಯಿ ಯೋಜನೆಯ ಡಿಪಿಆರ್‌ಗೆ ಅನುಮತಿ ನೀಡಿದೆ. ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಅನೇಕ ವರ್ಷಗಳಿಂದ ಕಾನೂನು ಹೋರಾಟ ನಡೆಸಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

‘ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮಹದಾಯಿ ಯೋಜನೆ ಅನುಷ್ಠಾನಕ್ಕೆ ಅನುಮತಿ ನೀಡಿದರೆ ಕಾನೂನು‌ ಹೋರಾಟ ನಡೆಸುತ್ತೇವೆ’ ಎನ್ನುವ ಗೋವಾ ಸಚಿವರ ಹೇಳಿಕೆಗೆ ಮಂಗಳವಾರ ನಗರದ ವಿಮಾನ ನಿಲ್ದಾಣದಲ್ಲಿ ಅವರು ಪ್ರತಿಕ್ರಿಯಿಸಿದರು.

‘ನ್ಯಾಯಾಧೀಕರಣದ ತೀರ್ಪಿನ ಅನುಷ್ಠಾನದ ಅಧಿಸೂಚನೆಯನ್ನು ಕೇಂದ್ರ ಸರ್ಕಾರ 2017ರಲ್ಲಿಯೇ ಪ್ರಕಟಿಸಿತ್ತು. ಇದೀಗ ಡಿಪಿಆರ್‌ಗೆ ಅನುಮೋದನೆ ದೊರೆತಿದ್ದು, ಹಂತ ಹಂತವಾಗಿ ಯೋಜನೆ ಅನುಷ್ಠಾನಗೊಳಿಸಲಾಗುವುದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT