ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಅಮಿತಾ ಪ್ರಸಾದ್
ಬೆಂಗಳೂರು: ಹುದ್ದೆ ನಿರೀಕ್ಷೆಯಲ್ಲಿದ್ದ ಹಿರಿಯ ಐಎಎಸ್ ಅಧಿಕಾರಿ ಡಾ. ಅಮಿತಾ ಪ್ರಸಾದ್ ಅವರನ್ನು ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಗೆ ನೇಮಿಸಲಾಗಿದೆ.
ವಂದಿತಾ ಶರ್ಮ ಅವರನ್ನು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಪ್ರಭಾರದಿಂದ ಬಿಡುಗಡೆ ಮಾಡಲಾಗಿದೆ.
ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ (ಕೆಯುಐಡಿಎಫ್‌ಸಿ) ವ್ಯವಸ್ಥಾಪಕ ಎಂ.ಟಿ. ರೇಜು ಅವರನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ. ಸಿ. ಶಿಖಾ ಅವರನ್ನು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರ ಹೆಚ್ಚುವರಿ ಪ್ರಭಾರದಿಂದ ಬಿಡುಗಡೆ ಮಾಡಲಾಗಿದೆ. ರೇಜು ಅವರಿಗೆ ಕೆಯುಐಡಿಎಫ್‌ಸಿ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಯ ಹೆಚ್ಚುವರಿ ಪ್ರಭಾರವನ್ನೂ ವಹಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.