ಭಾನುವಾರ, ಆಗಸ್ಟ್ 14, 2022
20 °C

ಡಾ.ಸಿ. ಚಂದ್ರಪ್ಪಗೆ ‘ವರ್ಷದ ಲೇಖಕ’ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ಕನ್ನಡ ಬರಹಗಾರರ ಮತ್ತು ‍ಪ್ರಕಾಶಕರ ಸಂಘವು ನೀಡುವ ‘ಹೇಮಂತ ವರ್ಷದ ಲೇಖಕ ಪ್ರಶಸ್ತಿ’ಗೆ ಡಾ.ಸಿ. ಚಂದ್ರಪ್ಪ ಆಯ್ಕೆಯಾಗಿದ್ದಾರೆ.

ಸಂಘವು ವಿವಿಧ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಡಾ.ಸಿ. ಚಂದ್ರಪ್ಪ ಅವರ ‘ಮಹಾಮಾನವನ ಮಹಾಯಾನ’ ಕೃತಿಯನ್ನು ಪ್ರಶಸ್ತಿಗೆ ಪರಿಗಣಿಸಲಾಗಿದೆ. ‘ಸಪ್ನಾ ವರ್ಷದ ಯುವ ಲೇಖಕ ಪ್ರಶಸ್ತಿ’ಗೆ ‘ಹಾಣಾದಿ’ ಕೃತಿಯ ಲೇಖಕ ಕಪಿಲ ಪಿ. ಹುಮನಾಬಾದೆ ಆಯ್ಕೆಯಾಗಿದ್ದಾರೆ. ‘ಕಣ್ವ ವರ್ಷದ ಪ್ರಕಾಶಕ’ ಪ್ರಶಸ್ತಿಗೆ ಅಂಕಿತ ಪುಸ್ತಕ ಪ್ರಕಾಶನದ ಪ್ರಕಾಶ್ ಕಂಬತ್ತಳ್ಳಿ ಭಾಜನರಾಗಿದ್ದಾರೆ. ಈ ಪ್ರಶಸ್ತಿಗಳು ತಲಾ ₹ 10 ಸಾವಿರ ನಗದು ಹಾಗೂ ಫಲಕವನ್ನು ಒಳಗೊಂಡಿದೆ.

‘ಪುಸ್ತಕ ಸಂಸ್ಕೃತಿಗೆ ಪೂರಕವಾಗಿ ಬರಹಗಾರರು ಮತ್ತು ಪ್ರಕಾಶಕರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ವಾರ್ಷಿಕ ಪ್ರಶಸ್ತಿಗಳನ್ನು ನೀಡುತ್ತಾ ಬಂದಿದ್ದೇವೆ. 2019ನೇ ಸಾಲಿನ ಪ್ರಶಸ್ತಿಯನ್ನು ವಿವಿಧ ಕ್ಷೇತ್ರಗಳ 10 ಜನ ತಜ್ಞರ ನೆರವಿನಿಂದ ಆಯ್ಕೆ ಮಾಡಲಾಗಿದೆ. 2021ರ ಫೆಬ್ರವರಿ ಕೊನೆಯ ವಾರದಲ್ಲಿ ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಸಲಾಗುವುದು’ ಎಂದು ಸಂಘದ ಅಧ್ಯಕ್ಷ ನಿಡಸಾಲೆ ಪುಟ್ಟಸ್ವಾಮಯ್ಯ ಹಾಗೂ ಕಾರ್ಯದರ್ಶಿ ಆರ್. ದೊಡ್ಡೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು