ಭಾನುವಾರ, ಮೇ 29, 2022
24 °C

ಮರುಘಾ ಶರಣರು, ಪುನೀತ್‌ಗೆ ಡಾ.ಎಚ್‌.ಎನ್ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ನೀಡುವ ‘ಡಾ.ಎಚ್.ನರಸಿಂಹಯ್ಯ ಪ್ರಶಸ್ತಿ’ಗೆ ಈ ಸಾಲಿಗೆ ಚಿತ್ರದುರ್ಗದ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಹಾಗೂ ಚಿತ್ರನಟ ಪುನೀತ್ ರಾಜ್‌ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ.

ಮುರುಘಾ ಶರಣರ ವೈಚಾರಿಕ, ವೈಜ್ಞಾನಿಕ ಚಿಂತನೆ, ಜಾತಿ ನಿರ್ಮೂಲನೆಗೆ ಶ್ರಮಿಸುತ್ತಿರುವುದು ಹಾಗೂ ಪುನೀತ್ ಅವರ ಸಮಾಜಮುಖಿ ಕೆಲಸಗಳನ್ನು ಗುರುತಿಸಿ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ಫಲಕ, ಸ್ಮರಣಿಕೆ ಹೊಂದಿದೆ.

‘ಡಿ.29ರಂದು ಶಿವಮೊಗ್ಗದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್‌ಕುಮಾರ್ ಪ್ರಶಸ್ತಿ ಪ್ರದಾನ ಮಾಡುವರು. ಚಿತ್ರ ನಟ ದೊಡ್ಡಣ್ಣ ಸೇರಿ 7 ಮಂದಿಗೆ ರಾಜ್ಯ ಮಟ್ಟದ ಸಾಧನಾ ಪ್ರಶಸ್ತಿ ನೀಡಿ ಗೌರವಿಸಲಾಗುವುದು’ ಎಂದು ಪರಿಷತ್ತಿನ ರಾಜ್ಯ ಘಟಕದ ಅಧ್ಯಕ್ಷ ಡಾ. ಹುಲಿಕಲ್ ನಟರಾಜ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು