ಸೋಮವಾರ, ಜುಲೈ 4, 2022
22 °C

ಆನೇಕಲ್‌: ಬಹಿರಂಗವಾಗೇ ಬಿಜೆಪಿ ಟಿಕೆಟ್‌ ಕೇಳಿದ ಕೆ.ಶಿವರಾಮ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಆನೇಕಲ್‌ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಟಿಕೆಟ್ ಕೊಡಿಸುವಂತೆ ನಿವೃತ್ತ ಐಎಎಸ್ ಅಧಿಕಾರಿ ಡಾ.ಕೆ.ಶಿವರಾಮ್ ಅವರು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರಿಗೆ ಬಹಿರಂಗವಾಗಿ ಮನವಿ ಮಾಡಿದರು.

ನಗರದ ತರಾಸು ರಂಗಮಂದಿರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್‌ನಿಂದ ಶನಿವಾರ ಆಯೋಜಿಸಿದ್ದ ಚಿತ್ರದುರ್ಗ ಜಿಲ್ಲಾ ವಿದ್ಯಾರ್ಥಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ‘ನೀವು ಆನೇಕಲ್‌ನಿಂದ ಚಿತ್ರದುರ್ಗಕ್ಕೆ ಬಂದಿದ್ದೀರಿ. ನನಗೆ ಆನೇಕಲ್‌ಗೆ ಟಿಕೆಟ್‌ ಕೊಡಿಸಿ ಆಶೀರ್ವಾದ ಮಾಡಿ. ವೈಯಕ್ತಿಕವಾಗಿ ಕೇಳದೆ, ಎಲ್ಲರ ಸಮ್ಮುಖದಲ್ಲೇ ಕೇಳುತ್ತಿದ್ದೇನೆ’ ಎಂದು ಕೋರಿದರು.

ಇದಕ್ಕೆ ತಮ್ಮ ಭಾಷಣದಲ್ಲಿ ಪ್ರತಿಕ್ರಿಯಿಸಿದ ನಾರಾಯಣಸ್ವಾಮಿ, ‘ನನ್ನ ಜೀವನದಲ್ಲಿ ಈವರೆಗೂ ಕಾನೂನು ಬಿಟ್ಟು ಏನನ್ನೂ ಮಾತಾಡಿಲ್ಲ. ಈ ವಿಚಾರದಲ್ಲಿ ಏನನ್ನೂ ಹೇಳಲ್ಲ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು