ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಯಾಣರಾವ್‌ಗೆ ಕಲಬುರ್ಗಿ ಸಂಶೋಧನಾ ಪ್ರಶಸ್ತಿ

Last Updated 7 ನವೆಂಬರ್ 2022, 19:30 IST
ಅಕ್ಷರ ಗಾತ್ರ

ಬಸವಕಲ್ಯಾಣ (ಬೀದರ್ ಜಿಲ್ಲೆ): ಸಾಹಿತಿ, ಸಂಶೋಧಕ ಡಾ. ಕಲ್ಯಾಣರಾವ್ ಪಾಟೀಲ ಅವರು ಪ್ರಸಕ್ತ ಸಾಲಿನ ಡಾ.ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಸಾಹಿತ್ಯ ಸಂಶೋಧನಾ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ವಿಶ್ವ ಬಸವಧರ್ಮ ವಿಶ್ವಸ್ಥ ಮಂಡಳಿ ಅಧ್ಯಕ್ಷ ಭಾಲ್ಕಿಯ ಬಸವಲಿಂಗ ಪಟ್ಟದ್ದೇವರ ಅಧ್ಯಕ್ಷತೆಯಲ್ಲಿ ಆಯ್ಕೆ ಮಾಡಲಾಗಿದೆ. ₹50 ಸಾವಿರ ನಗದು, ಫಲಕ ಒಳಗೊಂಡಿರುವ ಪ್ರಶಸ್ತಿಯನ್ನು ನ. 26ರಂದು ಬಸವಕಲ್ಯಾಣದಲ್ಲಿ ನಡೆಯುವ ಶರಣ ಕಮ್ಮಟ ಉತ್ಸವದಲ್ಲಿ ಪ್ರದಾನ ಮಾಡಲಾಗುವುದು.

ನಿವೃತ್ತ ಪ್ರಾಧ್ಯಾ ಪಕ ಕಲ್ಯಾಣರಾವ್ ಅವರು ಕಲಬುರಗಿ ಜಿಲ್ಲೆಯ ಕಮಲಾ ಪುರ ತಾಲ್ಲೂಕಿನ ಕಿಣಗಿಯವರು. ಎಂ.ಎಂ.ಕಲಬುರ್ಗಿ ಅವರ ಮಾರ್ಗ ಸಂಪುಟಗಳ ಪರಾಮರ್ಶೆಯ ಸಂಶೋ ಧನಾ ಮಹಾ ಪ್ರಬಂಧ ರಚಿಸಿ ಡಾಕ್ಟರೇಟ್ ಪದವಿ ಪಡೆದಿದ್ದಾರೆ. 51ಕ್ಕೂ ಹೆಚ್ಚು ಕೃತಿ ರಚಿಸಿದ್ದಾರೆ. ಅಧ್ಯಯನ, ಅಧ್ಯಾಪನ, ಸಂಶೋಧನೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT