ಭಾನುವಾರ, ಮೇ 29, 2022
30 °C

ದಂತ ವೈದ್ಯ ಪ್ರದೀಪ್‌ಗೆ ರಾಜ್ಯೋತ್ಸವ ಗೌರವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ನಗರದ ಖ್ಯಾತ ದಂತ ವೈದ್ಯ ಡಾ.ಎ.ಆರ್.ಪ್ರದೀಪ್ ಅವರಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಒಲಿದಿದೆ.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾಗಿರುವ ಇವರು ಗೌರವ ಪ್ರಾಧ್ಯಾಪಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಇವರ ಸೇವಾ ಮನೋಭಾವವನ್ನು ಗುರುತಿಸಿದ್ದ ರಾಜ್ಯ ಸರ್ಕಾರ ಡಾ.ಬಿ.ಸಿ.ರಾಯ್ ಪ್ರಶಸ್ತಿ ನೀಡಿ ಗೌರವಿಸಿತ್ತು. ಅಮೆರಿಕನ್ ಕಾಲೇಜ್ ಆಫ್‌ ಕಾರ್ಡಿಯಾಲಜಿಯಿಂದ ಹಾಗೂ ಇಂಡಿಯನ್ ಕಾಲೇಜ್ ಆಫ್‌ ಕಾರ್ಡಿಯಾಲಜಿಯಿಂದ ಫೆಲೋಷಿಪ್ ಕೂಡ ಪಡೆದಿದ್ದಾರೆ.

ಹಲವಾರು ಅಂತಾರಾಷ್ಟ್ರೀಯ ವಿಚಾರಸಂಕಿರಣಗಳಲ್ಲಿ ವಿಚಾರ ಮಂಡನೆ ಮಾಡಿರುವ ಡಾ.ಪ್ರದೀಪ್‌ ಹೃದ್ರೋಗದ ಕುರಿತು ಹಲವಾರು ಲೇಖನಗಳನ್ನು ರಚಿಸಿದ್ದಾರೆ. ಸುಮಾರು 60ಕ್ಕೂ ಹೆಚ್ಚು ಸಂಶೋಧನಾ ಲೇಖನಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟೀಯ ನಿಯತಕಾಲಿಕೆಗಳಲ್ಲಿ ಪ್ರಕಟವಾಗಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು